ಶಿವಮೊಗ್ಗ: ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಪರಿಸರಕ್ಕಾಗಿ ನಾವು, ರಾಷ್ಟ್ರಭಕ್ತರ ಬಳಗ ಹಾಗೂ ವಿವಿಧ ಪರಿಸರ ಸಂಘಟನೆಗಳ ಸಹಯೋಗದಲ್ಲಿ ಏ. 16ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.

‘ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಕೆಪಿಸಿಎಲ್ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಯೋಜನೆಯ ಸಂಪೂರ್ಣ ವಿವರ ನೀಡುವಂತೆ ನಾಲ್ಕೈದು ಬಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಅವರು ಮಾಹಿತಿ ನೀಡುತ್ತಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಆಗುವ ಮರಗಳ ಹಾನಿಯ ಬಗ್ಗೆ ಕೆಪಿಸಿಎಲ್ ಗಮನಿಸಿ, ಕಡಿಮೆ ವೆಚ್ಚದ ಬ್ಯಾಟರಿ ಸ್ಟೋರೇಜ್ ಸ್ಥಾಪನೆಗೆ ಮುಂದಾಗಬೇಕು’ ಎಂದು ಪರಿಸರ ಹೋರಾಟಗಾರ ಎಲ್.ಕೆ. ಶ್ರೀಪತಿ ಆಗ್ರಹಿಸಿದರು.

‘ಕೆಪಿಸಿಎಲ್ ತನ್ನ ಬಾಧ್ಯತೆಯಿಂದ ತಪ್ಪಿಸಿಕೊಳ್ಳುತ್ತಿದೆ. ಯೋಜನೆಯ ಡಿಪಿಆರ್ ಮಾಹಿತಿ ಕೋರಿದರೆ ಭದ್ರತೆಯ ನೆಪವೊಡ್ಡಿ ಕೊಡುತ್ತಿಲ್ಲ’ ಎಂದು ಪರಿಸರ ಹೋರಾಟಗಾರ ಶ್ರೀಕಾಂತ್ ಆರೋಪಿಸಿದರು. ರಾಷ್ಟ್ರಭಕ್ತರ ಬಳಗದ ಕೆ.ಈ. ಕಾಂತೇಶ್, ಈ. ವಿಶ್ವಾಸ್, ಮೋಹನ್ ಜಾಧವ್, ಜನಾರ್ಧನ್ ಪೈ, ಪರಿಸರ ಪ್ರಕಾಶ್, ಹರೀಶ್ ಕಾರ್ಣಿಕ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-42-646347673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.