ಶಿಕಾರಿಪುರ: ಸಂಸದ ರಾಘವೇಂದ್ರ ಅವರ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಇಲ್ಲವಾದಲ್ಲಿ ಅವರಿಗೆ ಘೇರಾವ್ ಹಾಕಲಾಗುವುದು ಎಂದು ಬಿಜೆಪಿ ಮುಖಂಡ ಮಹೇಶ್ ಹುಲ್ಮಾರ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಂಸದ ರಾಘವೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ನೂರಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ರೈಲ್ವೆ, ನೀರಾವರಿ ಯೋಜನೆ, ನೂರಾರು ಸಮುದಾಯ ಭವನಗಳ ನಿರ್ಮಾಣ ಮಾಡಿದ್ದಾರೆ. ಅವರ ಕುರಿತು ಸಚಿವ ಮಧು ಬಂಗಾರಪ್ಪ ಈಚೆಗೆ ಹಗುರವಾಗಿ ಮಾತನಾಡಿದ್ದಾರೆ. ಅದು ಸರಿಯಲ್ಲ. ಹೀಗೆ ಮುಂದುವರಿದರೆ ಅವರಿಗೆ ಘೇರಾವ್ ಹಾಕಲಾಗುವುದು’ ಎಂದರು.

ರಾಮನಗೌಡ್ರು, ಮುಗಳಗೆರೆ ಬೂದೆಪ್ಪ, ಕೆ.ಪಿ.ರುದ್ರಪ್ಪ, ಕೆಂಪಳ್ಳಿ ಗಂಗಪ್ಪ, ರವಿಕುಮಾರ್, ರಾಜಪ್ಪ ಅಮಟೆಕೊಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.