ಗುರುವಾರ , ಜನವರಿ 28, 2021
25 °C
ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಗ್ರಹ

ರೈಲು ಮಾರ್ಗ ನಿರ್ಮಾಣಕ್ಕೆ ಭೂಮಿಕೊಡುವ ರೈತರಿಗೆ ಯೋಗ್ಯ ಬೆಲೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಶಿವಮೊಗ್ಗ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ರೈತರ ಭೂಮಿಗೆ ಯೋಗ್ಯ ಬೆಲೆ ನೀಡಬೇಕು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಗ್ರಹಿಸಿದರು.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ನಿರ್ಧರಿಸಿರುವುದು ಸ್ವಾಗತರ್ಹ. ಆದರೆ, ಈ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದ ನಾಲ್ಕು ಪಟ್ಟು ಯೋಗ್ಯ ಬೆಲೆ ಕೊಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈ ಮಾರ್ಗದಲ್ಲಿ ಬಹುತೇಕ ಸಣ್ಣ ರೈತರಾಗಿದ್ದು, ಈ ಜಮೀನನ್ನು ನಂಬಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವರು ತೋಟ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಸಾರ್ವಜನಿಕ ಉದ್ದೇಶಕ್ಕಾಗಿ ರೈತರು ಭೂಮಿ ಬಿಟ್ಟುಕೊಡಲು ಸಿದ್ಧರಿದ್ದಾರೆ. ಹೀಗಾಗಿ ಇವರ ಭೂಮಿಗೆ ಉಪನೋಂದಣಿ ಕಚೇರಿಯಲ್ಲಿ ನಿಗದಿಯಾದ ದರಕ್ಕಿಂತ 20 ಪಟ್ಟು ಹೆಚ್ಚು ಮಾರುಕಟ್ಟೆ ಬೆಲೆ ಇದೆ. ಹಾಗಾಗಿ ಮಾರುಕಟ್ಟೆಯ 4 ಪಟ್ಟು ಅಂದರೆ ಅಂದಾಜು ಎಕರೆಗೆ ₹ 80 ಲಕ್ಷ ಬೆಲೆ ನೀಡಿ ಜಮೀನು ಖರೀದಿಸಬೇಕು ಎಂದು ಆಗ್ರಹಿಸಿದರು.

ಇದರ ಜೊತೆಗೆ ಅಡಿಕೆ ತೋಟ ಇದ್ದರೆ ಇನ್ನೂ ಹೆಚ್ಚಿನ ಬೆಲೆ ನಿಗದಿ ಮಾಡಬೇಕು. ನಿರಾಶ್ರಿತ ರೈತರ ಕುಟುಂಬಕ್ಕೆ ಉದ್ಯೋಗ ಕೊಡಿಸಬೇಕು. ಇಲ್ಲ ರೈತರಿಗೆ ಅದೇ ಗ್ರಾಮದಲ್ಲಿ ಪರ್ಯಾಯ ಜಮೀನು ಕೊಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಇ.ಬಿ. ಜಗದೀಶ್, ಹಿಟ್ಟೂರು ರಾಜು, ಎಸ್. ಶಿವಮೂರ್ತಿ, ಕೆ. ರಾಜು, ಭೋಜಾನಾಯ್ಕ, ಜ್ಞಾನೇಶ್, ನೇಮರಾಜ್, ಯೋಗೀಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು