ಶಿರಾಳಕೊಪ್ಪ (ಶಿಕಾರಿಪುರ): ‘ಶೈಕ್ಷಣಿಕ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಉತ್ತಮ ಮೂಲಸೌಕರ್ಯ ಒದಗಿಸಲು ಶ್ರಮಿಸಿದ ಬಿ.ಎಸ್.ಯಡಿಯೂರಪ್ಪ ಅಭಿನಂದನೆಗೆ ಅರ್ಹರು’ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಎಸ್ಜೆಪಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ನಡೆದ ಸಭಾಂಗಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ವೈದ್ಯಕೀಯ, ಆಯುರ್ವೇದ ಮೆಡಿಕಲ್ ಕಾಲೇಜು, ಕೃಷಿ ವಿವಿ, ಶಿರಾಳಕೊಪ್ಪದಲ್ಲಿ ಸರ್ಕಾರಿ ಪದವಿ ಕಾಲೇಜು, ಮಹಿಳಾ ಡಿಪ್ಲೊಮಾ ಕಾಲೇಜು, ಏಳು ಪಿಯು ಕಾಲೇಜು, 25ಕ್ಕೂ ಹೆಚ್ಚು ವಸತಿ ಶಾಲೆಗಳು ಸೇರಿ ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪನೆ ಮಾಡಿದ್ದಾರೆ’ ಎಂದು ಹೇಳಿದರು.

‘ಭಯೋತ್ಪಾದನೆ ವಿರುದ್ಧ ನಮ್ಮ ಸೈನಿಕರು ದಿಟ್ಟ ಹೋರಾಟ ಮಾಡುವ ಮೂಲಕ ದೇಶದ ಗೌರವ ಹೆಚ್ಚಿಸಿದ್ದಾರೆ. ಅವರಿಗೆ ದೇಶದ ಜನರೆಲ್ಲರೂ ಬೆಂಬಲವಾಗಿ ನಿಲ್ಲುವುದು ಇಂದಿನ ತುರ್ತು’ ಎಂದು ತಿಳಿಸಿದರು.

‘ಎಸ್ಜೆಪಿ ಕಾಲೇಜು ತಾಲ್ಲೂಕಿನಲ್ಲಿ ಪ್ರಥಮವಾಗಿ ತಾಂತ್ರಿಕ ಶಿಕ್ಷಣ ಆರಂಭಿಸಿ ಗ್ರಾಮೀಣ ಭಾಗದ ಜನರಿಗೆ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಿದೆ. ಇದೀಗ ಸ್ಮಾರ್ಟ್ ಕ್ಲಾಸ್ ಆರಂಭಿಸಿದ್ದು ವಿದ್ಯಾರ್ಥಿಗಳು ಇನ್ನಷ್ಟು ತಾಂತ್ರಿಕ ಕೌಶಲ, ನೈಪುಣ್ಯತೆ ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ಮಹಾಂತ ದೇಶೀಕೇಂದ್ರ ಸ್ವಾಮೀಜಿ, ಸದಸ್ಯರಾದ ಗುರುಬಸವ ಪಂಡಿತಾರಾಧ್ಯ ಸ್ವಾಮೀಜಿ, ಕೋಣಂದೂರು ಮಠದ ಶ್ರೀಪತಿ ಪಂಡಿತಾರಾಧ್ಯ ಸ್ವಾಮೀಜಿ, ಕಾರ್ಯದರ್ಶಿ ಮುರುಘರಾಜ್, ಸಹಕಾರ್ಯದರ್ಶಿ ನಿವೇದಿತಾ ರಾಜು, ಪುಟ್ಟರಾಜಗೌಡ, ರಾಮನಗೌಡ, ಲತಾ ಯೋಗೀಶ್, ಪ್ರಾಂಶುಪಾಲ ವೆಂಕಟೇಶ್, ಸುಮಾ ವಾಣಿ ಸಂಸ್ಥೆ ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.