ಶಿವಮೊಗ್ಗ: ‘ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮಗೊಳಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಗಲಭೆ ತಡೆಯಲು ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು: ಯಡಿಯೂರಪ್ಪ

‘ವಿಮಾನ ನಿಲ್ದಾಣ ₹ 386 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಹಲವರ ಹೆಸರು ನಾಮಕರಣ ಮಾಡಲು ಪ್ರಸ್ತಾವ ಬಂದಿದ್ದವು. ನಿಲ್ದಾಣ ನಿರ್ಮಾಣಕ್ಕೆ ಯಡಿಯೂರಪ್ಪ ಅವರು ಶ್ರಮಿಸಿದ್ದಾರೆ. ಹಾಗಾಗಿ, ಅವರ ಹೆಸರು ಅಂತಿಮಗೊಳಿಸಲಾಗಿದೆ. ಸಂಪುಟ ಅನುಮೋದನೆ ನೀಡಿದೆ. ಕೇಂದ್ರದಿಂದಲೂ ಒಪ್ಪಿಗೆ ಸಿಗಲಿದೆ. ರನ್‌ವೇ ಕಾಮಗಾರಿ, ರಾತ್ರಿ ಸಮಯದಲ್ಲೂ ವಿಮಾನ ಇಳಿಯಲು ಸೌಕರ್ಯ ಸೇರಿ ಹಲವು ಕೆಲಸಗಳಿಗೆ ₹60 ಕೋಟಿಯ ಅಗತ್ಯವಿದೆ. ಬಾಕಿ ಹಣ ತಕ್ಷಣ ಬಿಡುಗಡೆ ಮಾಡಲಾಗುವುದು. ಈ ವರ್ಷದ ಅಂತ್ಯದ ಒಳಗೆ ನಿಲ್ದಾಣ ಉದ್ಘಾಟನೆಯಾಗಲಿದೆ’ ಎಂದು ವಿವರ ನೀಡಿದರು.

ಶಾಂತಿ ಕದಡುವ ಕೆಲಸ ದುರದೃಷ್ಟಕರ: ಹುಬ್ಬಳ್ಳಿ ಘಟನೆ ಬಗ್ಗೆ ಬಿಎಸ್ವೈ ಪ್ರತಿಕ್ರಿಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.