ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿಯ ಬಸ್ತಿಕೊಪ್ಪದ ಗಣಪತಿನಾಯ್ಕ ಆ್ಯಂಡ್ ಕಂಪನಿಗೆ ಸೇರಿದ್ದ ಕಲ್ಲು ಗಣಿಗಾರಿಕೆಯ ಸ್ಥಳದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ತಪಾಸಣೆ ನಡೆಸಿ 100ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ವಶಪಡಿಸಿಕೊಂಡಿದೆ.

ಮೂರು ಹಂತಗಳಲ್ಲಿ ಜಿಲೆಟಿನ್ ಹಾಗೂ ಅಮೋನಿಯಂ ನೈಟ್ರೇಟ್ ಸ್ಫೋಟಿಸಿರುವ ಬಾಂಬ್ ನಿಷ್ಕ್ರಿಯ ದಳ ಇನ್ನುಳಿದ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದೆ. ಸ್ಫೋಟಕ ಪತ್ತೆಯಾದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಂಡನೆ: ಬಸ್ತಿಕೊಪ್ಪ, ಚಂದ್ರಗುತ್ತಿ ಸೇರಿ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಜೀವಕ್ಕೆ ಇದು ಮಾರಕವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ಜನರ ಜೀವ ರಕ್ಷಣೆಗೆ ಮುಂದಾಗಬೇಕು. ಸ್ಫೋಟ ನಡೆಸುತ್ತಿರುವುದರಿಂದ ಕೊಳವೆಬಾವಿಗಳಿಗೂ ಹಾನಿಯಾಗುತ್ತಿದ್ದು, ಕುಡಿಯುವ ನೀರು ಕಲುಷಿತಗೊಳ್ಳುವ ಅಪಾಯ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-488257550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.