ಶಿವಮೊಗ್ಗ: ‘ಮಲೆನಾಡಿನ ಜನರ ದಶಕಗಳ ಕನಸಾಗಿದ್ದ ‘ಶಿವಮೊಗ್ಗ– ಶೃಂಗೇರಿ– ಮಂಗಳೂರು’ ನೂತನ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಅಂತಿಮ ಸ್ಥಳ ಸಮೀಕ್ಷೆ (ಎಫ್ಎಲ್ಎಸ್) ಮತ್ತು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಕೆಗೆ ಕೇಂದ್ರದಿಂದ ಅನುಮೋದನೆ ದೊರೆತಿದ್ದು, ಶೀಘ್ರ ರೈಲ್ವೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ನಡೆಸಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

‘₹3,300 ಕೋಟಿ ಅಂದಾಜು ವೆಚ್ಚದ ಈ ಮಾರ್ಗವು 332 ಕಿ.ಮೀ ವ್ಯಾಪ್ತಿ ಹೊಂದಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮಾರ್ಗವು ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ ತಾಲ್ಲೂಕುಗಳನ್ನು ಸಂಪರ್ಕಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-1470771779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.