ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದರಿಂದ 4 ವರ್ಷದ ಬಾಲಕಿ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆ ಮುಂಭಾಗ ಆಟವಾಡುತ್ತಿದ್ದ ಇರ್ಜಾ ಕೌನೇನ್ (4) ಮೇಲೆ ಹಠಾತ್ ದಾಳಿ ನಡೆಸಿದ ನಾಯಿ, ಆಕೆಯ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಬಂದಿದ್ದು, ನಾಯಿಯನ್ನು ಓಡಿಸಿದ್ದಾರೆ. ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಕೃಷ್ಣಾನಾಯ್ಕ ಅವರ ಕಾಲಿಗೂ ನಾಯಿ ಕಚ್ಚಿ ಗಾಯಗೊಳಿಸಿದೆ. ಆಕಳ ಕರುವೊಂದರ ಮೇಲೂ ದಾಳಿ ನಡೆಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ತಕ್ಷಣವೇ ಅವುಗಳನ್ನು ಹಿಡಿಯಬೇಕೆಂದು ಸ್ಥಳೀಯರು ನಗರಸಭೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-42-1882235296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.