ರಸ್ತೆ ತಡೆದು ಪ್ರತಿಭಟನೆ; ಪರಿಹಾರ ಘೋಷಣೆ
ರಸ್ತೆ ತಡೆದು ಪ್ರತಿಭಟನೆ; ಪರಿಹಾರ ಘೋಷಣೆಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಕೊಡಬೇಕು, ಆ ಪ್ರದೇಶದಲ್ಲಿ ಗಾಂಜಾ ಹಾವಳಿ ತಡೆಗೆ ಆಗ್ರಹಿಸಿ ಸ್ಥಳೀಯರು ಊರಗಡೂರು– ಮತ್ತೂರು ರಸ್ತೆಯಲ್ಲಿ ಪ್ರತಿಭಟಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬೆಂಬಲ ವ್ಯಕ್ತಪಡಿಸಿದರು.
ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 10 ಲಕ್ಷ,
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ₹ 5 ಲಕ್ಷ ಪರಿಹಾರ ಘೋಷಿಸಿರುವ ಬಗ್ಗೆ ಮಾಹಿತಿ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.