ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ್ಮನ ಸೆಳೆದ ವಿದ್ಯಾರ್ಥಿಗಳು ಸೃಷ್ಟಿಸಿದ ನಕ್ಷೆ

Last Updated 15 ಆಗಸ್ಟ್ 2022, 5:13 IST
ಅಕ್ಷರ ಗಾತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸೊರಬ ಸಮೀಪದ ಜಡೆ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾಗಿದ್ದ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲೆ ಸೇರಿ 1,200ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲಕ್ಕೆ ರಾಷ್ಟ್ರಗೀತೆ ಹಾಡುವ ಮೂಲಕ ಭಾರತ ಮಾತೆಗೆ ವಿಶೇಷ ಗೌರವ ಸಲ್ಲಿಸಿದರು.

ಭಾರತದ ನಕ್ಷೆ ಹೋಲುವಂತೆ 1,200 ವಿದ್ಯಾರ್ಥಿಗಳನ್ನು ನಿಲ್ಲಿಸಲಾಗಿದ್ದು, ಕೇಸರಿ, ಬಿಳಿ ಹಾಗೂ ಹಸಿರು ಟೋಪಿ ಧರಿಸಿ ರಾಷ್ಟ್ರಗೀತೆ ಹಾಡಿರುವುದನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಜಿ.ಕುಮಾರ್, ಪ್ರಭಾರ ಬಿಇಒ ಮನಹೋರ, ಜಡೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ, ಪಿಡಿಒ ಚಿದಾನಂದ ಸೇರಿ ವಿವಿಧ ಶಾಲೆಯ ಮುಖ್ಯಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT