ಶಿವಮೊಗ್ಗ: ‘ತಾಲ್ಲೂಕಿನ ಸೂಗೂರಿನಲ್ಲಿ ಏ. 23 ಮತ್ತು 24ರಂದು ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ ಮತ್ತು ಈಶ್ವರಯ್ಯ ಗಂಗಮ್ಮ ಸಮುದಾಯ ಭವನದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ’ ಎಂದು ದೇವಸ್ಥಾನ ಸಮಿತಿ ಮುಖ್ಯಸ್ಥ ಜಿ.ಆರ್.ಮಹೇಶ್ವರಪ್ಪ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘24ರಂದು ಕಳಸಾರೋಹಣ ಮತ್ತು ಧರ್ಮಸಭೆ ನಡೆಯಲಿದೆ. ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಶಾರದಾ ಪೂರ್ಯಾನಾಯ್ಕ, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ ಭಾಗವಹಿಸಲಿದ್ದಾರೆ. ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸನ್ಮಾನ, ಹಾಸ್ಯ ಸಂಜೆ, ಭಕ್ತಿವಚನ, ಭರತನಾಟ್ಯ, ವಚನಗಾಯನ ಮತ್ತು ಗೀತೋತ್ಸವ ಕಾರ್ಯಕ್ರಮ ನಡೆಯಲಿವೆ. ಏ.25ರ ರಾತ್ರಿ 9ಕ್ಕೆ ಯುವಕರಿಂದ ‘ಶಾಂತಿಯೇ ಸಂಸಾರದ ಸಂಪತ್ತು’ ನಾಟಕ ಪ್ರದರ್ಶನವಾಗಲಿದೆ’ ಎಂದು ಮಾಹಿತಿ ನೀಡಿದರು.

‘₹4.25 ಕೋಟಿ ವೆಚ್ಚದ ದೇವಸ್ಥಾನ ಕಟ್ಟಡ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಅನುದಾನ ನೀಡಿದ್ದಾರೆ’ ಎಂದರು.

ನವಿಲಯ್ಯ, ಪಿ.ಎಂ. ಉಮಾ, ವಸಂತಕುಮಾರ್, ಉಮೇಶ್, ಶಾಂತವೀರಪ್ಪ, ನವೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-42-123626580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.