ತೀರ್ಥಹಳ್ಳಿ: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾಲಿ ನಿವೇಶನ ಕಬಳಿಸಲು ಹುನ್ನಾರ ನಡೆಯುತ್ತಿದೆ. ಪಟ್ಟಣ ಪಂಚಾಯಿತಿ ಆಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಅಮ್ರಪಾಲಿ ಸುರೇಶ್ ಒತ್ತಾಯಿಸಿದ್ದಾರೆ.

‘ಪಟ್ಟಣದ ಬಾಳೇಬೈಲಿನಲ್ಲಿ ಮಲ್ಲಿಕಾ ಆರ್. ಭಂಡಾರಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ನಿವೇಶನದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸುವ ಪ್ರಯತ್ನ ಮಾಡಲಾಗಿದೆ. ನಕಲಿ ದಾಖಲೆ ಸೃಷ್ಟಿಸುವ ದಂಧೆಗೆ ಕಡಿವಾಣ ಹಾಕಬೇಕು. ಅಂತವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ನಕಲಿ ದಾಖಲೆ ಸೃಷ್ಟಿಗೆ ಸಹಕಾರ ನೀಡುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ವರದಿ ಪಡೆದು ಜಿಲ್ಲಾಧಿಕಾರಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.