ತೀರ್ಥಹಳ್ಳಿ: ಸೋಮವಾರ ರಾತ್ರಿ ಗಾಳಿ, ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ತಾಲ್ಲೂಕಿನಾದ್ಯಂತ ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ.

ಬಾಳೆಬೈಲು ಸಮೀಪದ ಹಲಸಿನ ಮರವೊಂದಕ್ಕೆ ಸಿಡಿಲು ಹೊಡೆದ ಪರಿಣಾಮ ಸೀಳಿಕೊಂಡು ರೆಂಬೆಗಳು ಛಿದ್ರಗೊಂಡಿದೆ. ಹಲವು ಕಡೆಗಳಲ್ಲಿ ಗಾಳಿಗೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನ ಶುದ್ಧೀಕರಣದ ಘಟಕದ ವಿದ್ಯುತ್ ಕಂಬ ತುಂಡಾದ ಪರಿಣಾಮ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು.

ಆಗುಂಬೆ ಬಸ್ ನಿಲ್ದಾಣದ ಸಮೀಪದ ಕಟ್ಟಡದ ಮೇಲ್ಭಾಗದಲ್ಲಿದ್ದ ಜಾಹೀರಾತು ಬೃಹತ್ ಫಲಕ ತುಂಡಾಗಿದೆ. ವಿದ್ಯುತ್ ಕಂಬಗಳು ಮುರಿದ ಪರಿಣಾಮ ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಹಾನಿಗೊಳಗಾದ ಪ್ರದೇಶಗಳಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಎನ್. ಶೆಟ್ಟಿ, ತಹಶೀಲ್ದಾರ್ ಎಸ್. ರಂಜಿತ್, ಮುಖ್ಯಾಧಿಕಾರಿ ಡಿ.ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-42-1834211513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.