ಶಿವಮೊಗ್ಗ: ‘ಸಾಲ ಪಡೆದವರು ಕೊಟ್ಟ ದೂರು ಆಧರಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಸೆಕ್ಷನ್ 64ರ ಅಡಿಯಲ್ಲಿ ತೀರ್ಥಹಳ್ಳಿ ಮೂಲದ ಮೂರು ಸಹಕಾರ ಸಂಘಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ’ ಎಂದು ಅಲ್ಲಿನ ಸಹಕಾರ ಸಂಘಗಳ ಸಂತ್ರಸ್ತ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾನೀನ ಕಡಿದಾಳ ವಿಹಂಗಮ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ತೀರ್ಥಹಳ್ಳಿಯ ಶರಾವತಿ ಕ್ರೆಡಿಟ್ ಕೋ– ಆಪರೇಟಿವ್ ಸೊಸೈಟಿ, ಸಮೃದ್ಧಿ ತೋಟಗಾರಿಕಾ ಉತ್ಪನ್ನ ಮತ್ತು ಮಾರಾಟ ಸಹಕಾರ ಸಂಘ ಹಾಗೂ ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘಗಳ ವಿರುದ್ಧ ಮುಖ್ಯಮಂತ್ರಿ ಕಚೇರಿಯ ನಿರ್ದೇಶನದ ಮೇರೆಗೆ ಈ ತನಿಖೆಗೆ ಆದೇಶ ಹೊರಡಿಸಲಾಗಿದೆ’ ಎಂದರು.

‘ದಕ್ಷಿಣ ಕನ್ನಡದ ಸಹಕಾರ ಸಂಘಗಳ ಉಪ ರಿಜಿಸ್ಟ್ರಾರ್ಗೆ ಸಮೃದ್ಧಿ ತೋಟಗಾರಿಕಾ ಉತ್ಪನ್ನ ಮತ್ತು ಮಾರಾಟ ಸಹಕಾರ ಸಂಘದ ತನಿಖೆಯ ಜವಾಬ್ದಾರಿ ವಹಿಸಲಾಗಿದ್ದರೆ, ಬೆಂಗಳೂರಿನ ಸಹಕಾರ ಸಂಘಗಳ ಜಂಟಿ ರಿಜಿಸ್ಟ್ರಾರ್ಗೆ ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘದ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಇಬ್ಬರು ಅಧಿಕಾರಿಗಳೂ ಮೂರು ತಿಂಗಳೊಳಗೆ ತಮ್ಮ ವರದಿ ಸಲ್ಲಿಸಬೇಕಾಗಿದೆ’ ಎಂದು ತಿಳಿಸಿದರು.

ಅನ್ನಪೂರ್ಣ ಆರ್. ಜವಳಿ, ದಯಾನಂದ ಆರ್. ಪೂಜಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-42-480476176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.