ತ್ಯಾಗರ್ತಿ: ‘ವಾಹನ ಸವಾರರಿಗೆ ಅನುಕೂಲವಾಗುವಂತೆ ಸುಸಜ್ಜಿತ ಸರ್ಕಲ್ ನಿರ್ಮಾಣ ಮಾಡುವುದರ ಜೊತೆಗೆ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸಲಾಗುವುದು. ಸುಸಜ್ಜಿತ ಬಸ್ ನಿಲ್ದಾಣವನ್ನೂ ನಿರ್ಮಿಸಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೇಹಳ್ಳಿ ಸರ್ಕಲ್ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು.

‘ಎಡೇಹಳ್ಳಿಯಿಂದ ರಿಪ್ಪನ್ಪೇಟೆ ಸರ್ಕಲ್ವರೆಗೆ ಒಟ್ಟು ₹ 27.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಗಾಣಿಗರ ಕೆರೆ ಬಳಿ ನಡಿಗೆ ಪಥ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಈಗಾಗಲೇ ಮಂಜೂರಾಗಿದ್ದು, ನೀರಿನ ಮಟ್ಟ ಸ್ವಲ್ಪ ಇಳಿದ ನಂತರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಪ್ರಾರಂಭಿಸಲಾಗುವುದು. ತಾಲ್ಲೂಕಿನ ಪ್ರತಿ ಹೋಬಳಿ ಮಟ್ಟದಲ್ಲಿ ಫುಡ್ಕೋರ್ಟ್ ಮತ್ತು ನಂದಿನಿ ಪಾರ್ಲರ್ಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ’ ಎಂದರು.

‘ಆನಂದಪುರ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ₹ 60 ಲಕ್ಷ ಅನುದಾನ ಮಂಜೂರು ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ವಿರೋಧ ಪಕ್ಷದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದರು. ಪಕ್ಷದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-42-644445306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.