ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ

Last Updated 8 ಏಪ್ರಿಲ್ 2022, 4:25 IST
ಅಕ್ಷರ ಗಾತ್ರ

ಶಿವಮೊಗ್ಗ: ಕೊರೊನಾ ಕಾರಣಕ್ಕೆ ಸ್ಥಗಿತವಾಗಿದ್ದ ಶಿವಮೊಗ್ಗ–ರೇಣಿಗುಂಟ (ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರ ಏ.17ರಿಂದ ‍ಪುನರಾರಂಭಗೊಳ್ಳಲಿದೆ.

ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್‌ನಿಂದ ಸೋಮವಾರ ಮತ್ತು ಬುಧವಾರ ಈ ರೈಲು ಸಂಚರಿಸಲಿದೆ.

ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7ಕ್ಕೆ ಹೊರಟು ಮರುದಿನ ಬೆಳಿಗ್ಗೆ 8.20ಕ್ಕೆ ರೇಣಿಗುಂಟವನ್ನು ಹಾಗೂ 11.10ಕ್ಕೆ ಮದ್ರಾಸ್‌ ತಲುಪುತ್ತದೆ. ಅದೇ ದಿನ ಮದ್ರಾಸ್‌ನಿಂದ ಸಂಜೆ 3.50ಕ್ಕೆ ಹೊರಡುವ ಈ ರೈಲು ರೇಣಿಗುಂಟಕ್ಕೆ ಸಂಜೆ 6.10ಕ್ಕೆ ತಲುಪಿ ಮರುದಿನ ಬೆಳಿಗ್ಗೆ 7.55ಕ್ಕೆ ಶಿವಮೊಗ್ಗವನ್ನುತಲುಪಲಿದೆ.

ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ಜನರು ರೇಣಿಗುಂಟಕ್ಕೆ ಮುಂಜಾನೆ ತಲುಪಿ ಸಂಜೆಯ ವೇಳೆಗೆ ತಿರುಪತಿಯಲ್ಲಿ ದೇವರ ದರ್ಶನ ಪಡೆದುಅದೇ ದಿನ ರಾತ್ರಿ ಶಿವಮೊಗ್ಗ ಮರುಪ್ರಯಾಣ ಆರಂಭಿಸಲು ಈ ಬದಲಾದ ಸಮಯ ನೆರವಾಗಲಿದೆ. ಈ ಮೊದಲಿನ ರೈಲು ಸೇವೆಯು ಶಿವಮೊಗ್ಗದಿಂದ ಮುಂಜಾನೆ ತನ್ನ ಪ್ರಯಾಣವನ್ನು ಆರಂಭಿಸುತ್ತಿರುವುದರಿಂದ ಶಿವಮೊಗ್ಗದಿಂದ ತಿರುಪತಿಗೆ ತೆರಳಲು ಬಯಸುತ್ತಿದ್ದ ಪ್ರಯಾಣಿಕರು ಇಡೀ ದಿನವನ್ನು ರೈಲಿನಲ್ಲಿ ಕಳೆಯಬೇಕಾಗಿತ್ತು.

ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದ ಫಲವಾಗಿ ಶಿವಮೊಗ್ಗ–ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್‌ ಎಕ್ಸ್‌ಪ್ರೆಸ್‌ ವಾರಕ್ಕೆ ಎರಡು ಭಾರಿ ಸಂಚರಿಸುವ ರೈಲು ಸೇವೆಗಳನ್ನು ಆರಂಭಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT