ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಪ್ರದೇಶದ ಬಳಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಹಣ, ಆಭರಣ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 12 ಗಂಟೆಯೊಳಗೆ ಬಂಧಿಸಿದ್ದಾರೆ.

ಏ. 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಲಿಂಗತ್ವ ಅಲ್ಪಸಂಖ್ಯಾತರರೊಬ್ಬರನ್ನು ಆಟೊದಲ್ಲಿ ಕರೆದುಕೊಂಡು ಹೋಗಿ ₹4,000 ನಗದು, ಮೊಬೈಲ್, ಕೊರಳಲ್ಲಿದ್ದ ಸರ ಹಾಗೂ ಬಂಗಾರದ ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದ.

ಈ ಕುರಿತು ಏ. 25ರಂದು ದೂರು ದಾಖಲಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನಗರದ ಹಳೆ ಮಂಡ್ಲಿ ನಿವಾಸಿ ದೇವರಾಜ (27) ಎಂಬಾತನನ್ನು ಬಂಧಿಸಿ, ಆರೋಪಿಯಿಂದ ₹20,000 ಮೌಲ್ಯದ ಮೊಬೈಲ್, ಕೃತ್ಯಕ್ಕೆ ಬಳಸಿದ ₹3 ಲಕ್ಷ ಮೌಲ್ಯದ ಆಟೊ ಹಾಗೂ ಒಂದು ಚಾಕು ಸೇರಿದಂತೆ ಒಟ್ಟು ₹3.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-1968656142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.