ಶಿವಮೊಗ್ಗ: ನಗರದಲ್ಲಿ ಫುಟ್ಪಾತ್ ಮತ್ತು ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಇದ್ದ ಹೂವಿನ ಮಾರುಕಟ್ಟೆಯನ್ನು ಶನಿವಾರ ಬೆಳಿಗ್ಗೆ ತೆರವುಗೊಳಿಸಲಾಗಿದೆ.

ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದರು. ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಎನ್ಡಿವಿ ಹಾಸ್ಟೆಲ್ವರೆಗೆ ಇದ್ದ ಮಳಿಗೆಗಳನ್ನು ತೆರವು ಮಾಡಲಾಗಿದೆ.

ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು ಮತ್ತು ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿತ್ತು. ಹಾಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಅನಧಿಕೃತ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಇನ್ನು, ಈ ಹಿಂದೆ ಸಂಚಾರ ಠಾಣೆ ಪೊಲೀಸರು ಈ ಮಳಿಗೆಗಳು ರಸ್ತೆಯ ಹೊರಗೆ ಇರಬೇಕೆಂದು ಸೂಚಿಸಿದ್ದರು. ರಸ್ತೆಯ ಎರಡು ಬದಿಗಿದ್ದ ಬಿಳಿ ಪಟ್ಟಿಯ ಹೊರಗೆ ಮಳಿಗೆಗಳನ್ನು ಇರಿಸುವಂತೆ ಗಡುವು ನೀಡಿದ್ದರು. ಆದರೆ, ದಿನ ಕಳೆದಂತೆ ಪುನಃ ಮಳಿಗೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿದ್ದವು.

ಆದ್ದರಿಂದ ಪಾಲಿಕೆ ಮತ್ತು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಠಾಣೆ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-958134274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.