ಶಿವಮೊಗ್ಗ: ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಗರದ ಅನವರತ ಫೌಂಡೇಷನ್ ಮತ್ತು ಸಂಸ್ಕಾರ ಭಾರತಿ ಸಹಯೋಗದೊಂದಿಗೆ ಏ.18ರಂದು ಬೆಳಿಗ್ಗೆ 9ರಿಂದ ರಾತ್ರಿ 8ರ ವರೆಗೆ ನಾನೇ ಭಾರತ-ತಾಯಿ ಭಾರತಿಗೆ ಕನ್ನಡದಾರತಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅನವರತ ಫೌಂಡೇಷನ್ ಅಧ್ಯಕ್ಷರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ದೇಶದ ಐತಿಹಾಸದ ಸತ್ಯ ಸಂಗತಿಗಳನ್ನು ಸಾರ್ವಜನಿಕರಿಗೆ ತಿಳಿಸುವುದು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೂರು ಹಂತಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಕರ್ನಲ್ ಎ.ಎಸ್. ರಘುನಾಥ್ ಅವರಿಂದ ರಾಷ್ಟ್ರಧ್ವಜಾರೋಹಣ ನಡೆಯಲಿದೆ. ಈ ವೇಳೆ ಶಿವಮೊಗ್ಗದ ಸಂಗೀತ ಶಾಲೆಗಳ 150 ಗಾಯಕರು ವಂದೇ ಮಾತರಂ ಹಾಡಲಿದ್ದಾರೆ. ನಂತರ ಸ್ವಾತಂತ್ರ್ಯ ಹೋರಾಟಗಾರ ವಾಸುದೇವ್ ಬಲವಂತ್ ಫಡ್ಕೆ ಅವರ ಕುರಿತ`ಅಧಮ್ಯ ಭಾರತ’ ವಿಶೇಷ ಪ್ರದರ್ಶನ ನಡೆಯಲಿದೆ ಎಂದರು.

ಸಂಜೆ 5.30ಕ್ಕೆ ಚಕ್ರವರ್ತಿ ಸೂಲಿಬೆಲೆ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಸಂಗೀತ ದಿಗ್ಗಜರಾದ ಪ್ರಹ್ಲಾದ್ ದೀಕ್ಷಿತ್, ವಿದ್ವಾನ್ ಎಚ್.ಎಸ್. ನಾಗರಾಜ್, ಗಾಯಕ ಅರುಣ್ ಅವರಿಂದ ದೇಶಭಕ್ತಿ ಗೀತಗಾಯನ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಾಗರಾಜ್, ಜ್ಞಾನೇಶ್ವರ, ಮೋಹನ, ಸಂಸ್ಕಾರ ಭಾರತೀಯ ಸವಿತಾ ಮಾಧವ್, ರಂಜನಿ ಬಿದರಳ್ಳಿ, ಚೈತ್ರಾ ಸಜ್ಜನ್, ವಸುಂಧರಾ, ಮಂಜುನಾಥ್, ಸಹನಾ ಚೇತನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-42-1465788201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.