ಶಿವಮೊಗ್ಗ: ‘ಮಧ್ಯಮ ವರ್ಗದವರು, ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡುವ ವಾಸವಿ ಶಿಕ್ಷಣ ಸಂಸ್ಥೆ ಮಲೆನಾಡಿನ ಅತ್ಯಂತ ಜನಾನುರಾಗಿ ಸಂಸ್ಥೆಯಾಗಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಕೋಟೆ ರಸ್ತೆಯಲ್ಲಿ ಶುಕ್ರವಾರ ವಾಸವಿ ವಿದ್ಯಾಲಯದ ನೂತನ ಶೈಕ್ಷಣಿಕ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು. ‘ರಾಷ್ಟ್ರಮಟ್ಟದ ಬನ್ಸಾಲ್ ವಿದ್ಯಾಸಂಸ್ಥೆಯು ವಾಸವಿ ಸಂಸ್ಥೆಯೊಂದಿಗೆ ಕೈಜೋಡಿಸಿ ಪಿಯು ವಿಜ್ಞಾನ ಕಾಲೇಜು ಆರಂಭಿಸಿದೆ. ವಾಸವಿ ಜನಾಂಗವೇ ಶಿವಮೊಗ್ಗಕ್ಕೆ ದೊಡ್ಡ ಆಸ್ತಿ ಆಗಿದ್ದು, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ದೊಡ್ಡ ಕೆಲಸ ಮಾಡುತ್ತಿದೆ’ ಎಂದು ಶ್ಲಾಘಿಸಿದರು.

ವಾಸವಿ ಮಹಾವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ.ಶೇಷಾಚಲ ಪ್ರಾಸ್ತಾವಿಕವಾಗಿ ಮಾತನಾಡಿದರು. ‘ಸಂಸ್ಥೆಗೆ 45 ವರ್ಷ ತುಂಬಿದೆ. ಫೆಬ್ರುವರಿಯಲ್ಲಿ ವಾಸವಿ ವಿದ್ಯಾಲಯದ ಶೈಕ್ಷಣಿಕ ಸಂಕೀರ್ಣದ ಭೂಮಿ ಪೂಜೆ ಮಾಡಲಾಗಿತ್ತು. ಮಳೆಯ ಕಾರಣದಿಂದ ಜೂನ್ ತಿಂಗಳಲ್ಲಿ ನಿರ್ಮಾಣ ಕಾಮಗಾರಿ ಶುರುವಾಗಿತ್ತು. ₹6 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ’ ಎಂದು ತಿಳಿಸಿದರು.

‘ಇಲ್ಲಿನ ಮಕ್ಕಳು ಭವಿಷ್ಯದಲ್ಲಿ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಗಳಿಗೆ ಹೋಗುವುದನ್ನು ತಡೆಯಬೇಕಿದೆ. ವಾಸವಿ ವಿದ್ಯಾಸಂಸ್ಥೆ ಬಹಳ ವರ್ಷಗಳಿಂದ ಅನೇಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ವಿದ್ಯೆಗೆ ಬಹಳ ಬೇಡಿಕೆ ಇದ್ದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ ಹೇಳಿದರು.

ಕಾಲೇಜಿನ ಹಳೆಯ ವಿದ್ಯಾರ್ಥಿ, ಆಚಾರ್ಯ ಶಾಮಶಂಕರ ಭಟ್ ನೂತನ ಕಟ್ಟಡ ಉದ್ಘಾಟಿಸಿದರು. ವಾಸವಿ ಶಾಲೆ ಸಂಸ್ಥಾಪಕ ಅಧ್ಯಕ್ಷ ಭೂಪಾಳಂ ಶಶಿಧರ್ ಮತ್ತು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಗೌರವ ಸಮರ್ಪಿಸಲಾಯಿತು. ವಾಸವಿ ವಿದ್ಯಾಲಯದ ಅಧ್ಯಕ್ಷ ಬಿ.ಎಲ್.ಶಾಮಸುಂದರ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಗಳೂರಿನ ತ್ರಿವಿಕ್ ಫೌಂಡೇಷನ್ನ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಶಿವಮೊಗ್ಗದ ಡಿಇಸಿಟಿ ಕಾರ್ಯದರ್ಶಿ ಎಂ.ಎಸ್.ಪ್ರಶಾಂತ್, ಪ್ರಮುಖರಾದ ಎಚ್.ಮಂಜುನಾಥ, ಎಸ್.ಎನ್.ಹಾಲಪ್ಪ, ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.