ಶಿವಮೊಗ್ಗ: ‘ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ. ಯಾವತ್ತಿಗೂ ಬೇರೆಯಲ್ಲ. ಆದರೆ ಅದನ್ನು ಕೆಲವರು ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ಬಿಂಬಿಸಲು ಹೊರಟಿದ್ದಾರೆ’ ಎಂದು ಶಿರಹಟ್ಟಿಯ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಗುರುವಾರ ಸಂಜೆ ವೀರಶೈವ ಲಿಂಗಾಯತ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಶಿವ ಸಂಕಲ್ಪ ಮಹಿಳಾ ಘಟಕ ಹಾಗೂ ಕೆಳದಿ ರಾಣಿ ಚನ್ನಮ್ಮಾಜಿ ಅವರ 352ನೇ ಸ್ಮರಣೋತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದರು.

‘ಕೆಲವರು ವೀರಶೈವ ಲಿಂಗಾಯತ ಧರ್ಮವನ್ನು ವಿಭಜಿಸಿ ಸಮುದಾಯವನ್ನು ಒಡೆಯಲು ಮುಂದಾಗಿದ್ದಾರೆ. ಸಿದ್ಧಾಂತಗಳನ್ನು ರಾಜಕೀಯ ವ್ಯವಸ್ಥೆಗಾಗಿ ವಿಘಟನೆ ಮಾಡಿಕೊಂಡು ಹೋಗಬಾರದು. 2017ರಿಂದಲೂ ಎರಡೂ ಒಂದೇ ಎಂದು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಯಾವುದೇ ಸಮಾಜವಿರಲಿ ಒಂದಾಗಬೇಕೇ ವಿನಃ ವಿಘಟನೆ ಆಗಬಾರದು. ಸಂಘಟನೆ ನಮ್ಮ ಗುರಿ ಆಗಬೇಕು. ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕಿದೆ’ ಎಂದರು.

‘ಮಹಿಳೆಯ ಸಾಹಸ, ಬುದ್ಧಿಶಕ್ತಿಯ ಮುಂದೆ ಯಾವ ಪುರುಷನೂ ಸರಿಸಾಟಿಯಲ್ಲ. ಮಹಿಳೆ ಎಲ್ಲಿಯವರೆಗೆ ಆಡಳಿತಕ್ಕೆ ಬರುವುದಿಲ್ಲವೋ ಅಲ್ಲಿಯವರೆಗೆ ಸಮಾಜದಲ್ಲಿ ಸುಧಾರಣೆ ಸಾಧ್ಯವೇ ಇಲ್ಲ. ಮಹಿಳೆ ಒಂದು ಶಕ್ತಿ ಎಂಬುದೇ ರೋಮಾಂಚಕ. ಮಹಿಳೆಯರು ವೀರಶೈವ ಲಿಂಗಾಯತರಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಂಗದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಯಾವುದೇ ಒಂದು ಕ್ಷೇತ್ರದಲ್ಲಿ ಮುಂದುವರಿದರೆ ಮತ್ತೆ ಅವರನ್ನು ಹಿಂದಕ್ಕೆ ಕರೆತರಲು ಸಾಧ್ಯವೇ ಇಲ್ಲ. ಅದಕ್ಕೆ ತಮಿಳುನಾಡಿನ ಸಿಎಂ ಆಗಿದ್ದ ಜಯಲಲಿತಾ, ಇದೀಗ ಪಶ್ಚಿಮ ಬಂಗಾಳದಲ್ಲಿ ಸಿಎಂ ಆಗಿರುವ ಮಮತಾ ಬ್ಯಾನರ್ಜಿಯೇ ಸಾಕ್ಷಿ’ ಎಂದು ಹೇಳಿದರು.

ಕಲಾವಿದೆ ಇಂದುಮತಿ ಸಾಲಿಮಠ ವಿಶೇಷ ಉಪನ್ಯಾಸ ನೀಡಿದರು. ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಆಶಾ ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

ವೃಷಭೇಂದ್ರ ಸ್ವಾಮೀಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಶಿವ ಸಂಕಲ್ಪ ಜಿಲ್ಲಾ ಘಟಕದ ಅಧ್ಯಕ್ಷ ಇ.ವಿಶ್ವಾಸ್, ಪ್ರಮುಖರಾದ ಸೋಮಶೇಖರ್, ಶ್ರೀಕಾಂತ್, ಬಿ.ಎಂ.ಲಿಂಗಮೂರ್ತಿ, ಘಟಕದ ಉಪಾಧ್ಯಕ್ಷೆ ಗೌರಮ್ಮ ಷಡಕ್ಷರಿ, ರತ್ನಮ್ಮ ಮಂಜುನಾಥ, ಪುಷ್ಪಾ, ವಿನೂತಾ ಅರವಿಂದ್ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-42-561499000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.