ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ–ಸಿಂಹಧಾಮದಲ್ಲಿ ಮಾರ್ಚ್ 19ರಂದು ನೀರಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ತರಬೇತಿ ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಶುಕ್ರವಾರ ಗೋಪಿ ವೃತ್ತದಲ್ಲಿ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪಶು ವೈದ್ಯಕೀಯ ಪರಿಷತ್ತು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸಮೀಕ್ಷಾ ರೆಡ್ಡಿ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ. ಕೆಲಸದ ಸ್ಥಳದಲ್ಲಿ ಪಶು ವೈದ್ಯರಿಗೆ ಯಾವುದೇ ರಕ್ಷಣೆ ಇಲ್ಲದಿರುವುದಕ್ಕೆ ಇದು ನಿದರ್ಶನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೇಣದ ಬತ್ತಿ ಹಚ್ಚಿ ಸಮೀಕ್ಷಾ ರೆಡ್ಡಿ ಆತ್ಮಕ್ಕೆ ಶಾಂತಿ ಕೋರಿದರು.

ಮೃಗಾಲಯದಲ್ಲಿ ಸಾಮಾನ್ಯವಾಗಿ ಅಲ್ಲಿನ ಸಿಬ್ಬಂದಿ, ವೀಕ್ಷಕರು ಹಾಗೂ ಪ್ರಾಣಿಗಳ ಹಿತರಕ್ಷಣೆಗೆ ಅಗತ್ಯವಿರುವ ನಿಯಮಾವಳಿಗಳ ಪಾಲನೆ (ಎಸ್ಒಪಿ) ಮಾಡಲಾಗುತ್ತದೆ. ಆದರೆ ಸಮೀಕ್ಷಾ ರೆಡ್ಡಿ ವಿಚಾರದಲ್ಲಿ ಅದ್ಯಾವುದೂ ಆಗಿಲ್ಲ. ನೀರಾನೆಯ ನೆಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಆಗಿದ್ದರೂ ಅದರಲ್ಲಿನ ದೃಶ್ಯಾವಳಿಗಳು ಲಭ್ಯವಿಲ್ಲ ಎಂಬ ಮಾಹಿತಿ ಇದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-42-1026141444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.