ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಮತ್ತು ಸುತ್ತಲಿನ ಗ್ರಾಮಗಳ ಕೆರೆಗಳಿಗೆ ಉಬ್ರಾಣಿ ಏತ ನೀರಾವರಿ ಯೋಜನೆಯಿಂದ ನೀರು ಹರಿಸುವಂತೆ ಹಾಗೂ ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಯೋಜನೆ ವ್ಯಾಪ್ತಿಯ ಗ್ರಾಮಗಳ ರೈತ ಹೋರಾಟ ಸಮಿತಿಯಿಂದ ಈಚೆಗೆ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಸಾಗರ ರಸ್ತೆಯಲ್ಲಿರುವ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಎಂಜಿನಿಯರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು, ‘ಉಬ್ರಾಣಿ ಮತ್ತು ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗಳಡಿ ಈ ಹಿಂದೆ ಚನ್ನಗಿರಿ ಮತ್ತು ಹೊನ್ನಾಳಿ ತಾಲ್ಲೂಕಿನ ಹಲವು ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಅದು ಕಾರ್ಯಗತಗೊಂಡಿಲ್ಲ’ ಎಂದು ದೂರಿದರು.

‘ಹೊದಿಗೆರೆ ಹಾಗೂ ಸುತ್ತಲಿನ ಜೋಡಿ ತಿಮ್ಲಾಪುರ, ಬೆಂಕಿಕೆರೆ, ಹೆಬ್ಬಳಗೆರೆ, ಹರಳಕಟ್ಟ, ಮಾದಾಪುರ, ಶೆಟ್ಟಿಹಳ್ಳಿ, ಎರಗಟ್ಟಿ ಹಳ್ಳಿ, ಕೆಂಚಾಪುರ, ಬಯಲು ಬಸಪ್ಪನಕಟ್ಟೆ, ವಿ.ರಾಮೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಕೆರೆಗಳಿಗೆ ಈ ಯೋಜನೆಯಿಂದ ಇಲ್ಲಿಯವರೆಗೂ ಪ್ರಯೋಜನ ಆಗಿಲ್ಲ. ಈ ಭಾಗದಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರು, ವ್ಯವಸಾಯಕ್ಕೆ ರೈತರು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.

‘ಕೃಷಿಗೆ ಹೆಚ್ಚಿನ ರೈತರು ಕೊಳವೆ ಬಾವಿಗಳನ್ನು ಅವಲಂಬಿಸಿದ್ದಾರೆ. ಅಂತರ್ಜಲ ಮಟ್ಟ ಕುಸಿದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೆರೆಗಳು ತುಂಬಿದಲ್ಲಿ ಈ ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಆದ್ದರಿಂದ ಉಬ್ರಾಣಿ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ಒದಗಿಸಿ’ ಎಂದು ರೈತರು ಒತ್ತಾಯಿಸಿದರು.

‘ಸಾಸ್ವೆಹಳ್ಳಿ ಯೋಜನೆಯಡಿ ಜಕ್ಕಲಿಯಿಂದ ಪೈಪ್ಲೈನ್ ಮೂಲಕ ತುರ್ತಾಗಿ ಕೆರೆಗಳಿಗೆ ನೀರು ತುಂಬಿಸಬೇಕು. ಯೋಜನೆಯ ಮೊದಲ ಹಂತದಲ್ಲಿ ಬಿಡುಗಡೆಯಾಗಿರುವ ₹100 ಕೋಟಿ ಹಾಗೂ ಎರಡನೇ ಹಂತದ ₹365 ಕೋಟಿಯ ಬಳಕೆಗೆ ಆದಷ್ಟು ಬೇಗ ಟೆಂಡರ್ ಕರೆದು ತುರ್ತಾಗಿ ಕಾಮಗಾರಿ ಆರಂಭಿಸಬೇಕು. ಯೋಜನೆಯ ಅನುಷ್ಠಾನಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಉಬ್ರಾಣಿ ಹಾಗೂ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗಳ ಕಾರ್ಯಪಾಲನಾ ಉಪವಿಭಾಗದ ಕಚೇರಿಯನ್ನು ಚನ್ನಗಿರಿಯಲ್ಲೇ ತೆರೆಯುವಂತೆ ರೈತ ಹೋರಾಟ ಸಮಿತಿ ಆಗ್ರಹಿಸಿತು.

ರಮೇಶ್ ಹೊದಿಗೆರೆ, ಮಂಜಣ್ಣ ಹುಗ್ಗೆ, ಜಾನಪ್ರಕಾಶ್, ಪಿ.ಜೆ.ರುದ್ರಪ್ಪ, ಶೇಖರಪ್ಪ ಮೇದಿಗೆರೆ, ಹರೀಶ್ ಪೂಜಾರ್, ಉಮೇಶ್, ಕೆಂಚಪ್ಪ ಮಾಳೇಹಳ್ಳಿ, ಪವಿ, ಮಂಜು, ಸ್ವಾಮಿ, ಎಚ್.ಮಂಜು ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-42-640570906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.