ಶಿವಮೊಗ್ಗ: ‘ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಆಲಂ ಶರೀಫ್ ಅವರು ಏ. 20ರಿಂದ 23ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.20ರ ಮಧ್ಯಾಹ್ನ 3 ಗಂಟೆಗೆ ಭದ್ರಾವತಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ದೊಡ್ಡೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಂವಾದ ನಡೆಸಿ ಸಂಜೆ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಮಲೇಶಂಕರದಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತು 21ರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ನಂತರ ಅಮ್ಮನಘಟ್ಟ ಮತ್ತು ಹುಂಚ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ ಕಾರ್ಗಲ್ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

22ರಂದು ಜೋಗದ ಸರ್ಕ್ಯೂಟ್ ಹೌಸ್ನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳು, ಸಾಗರ ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಗೇರುಸೊಪ್ಪ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಚರ್ಚೆ ಮಾಡಲಿದ್ದಾರೆ. ಸಂಜೆ ಮುರುಡೇಶ್ವರ ಮತ್ತು ಭಟ್ಕಳದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.

23ರ ಬೆಳಿಗ್ಗೆ ಕೊಲ್ಲೂರು ಮತ್ತು ಸಿಗಂದೂರಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ಕೊಡಚಾದ್ರಿ ಪ್ರದೇಶಕ್ಕೆ ತೆರಳಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಸಂಜೆ ಚಕ್ರನಗರದ ಅರಣ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-42-1507129074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.