ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಜನಸಂಖ್ಯೆ ದುಷ್ಪರಿಣಾಮಗಳ ಕುರಿತು ಅರಿವು ಅಗತ್ಯ: ಮೇಯರ್

Published 11 ಜುಲೈ 2023, 16:07 IST
Last Updated 11 ಜುಲೈ 2023, 16:07 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಜನಸಂಖ್ಯೆಯಿಂದಾಗುವ ದುಷ್ಪರಿಣಾಮದ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ’ ಎಂದು ಮಹಾನಗರ ಪಾಲಿಕೆ ಮೇಯರ್ ಎಸ್.ಶಿವಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಎಫ್‍ಪಿಎಐ ವತಿಯಿಂದ ಇಲ್ಲಿನ ತುಂಗಾನಗರದ ಪ್ರಸೂತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜನಸಂಖ್ಯೆ ನಿಯಂತ್ರಣದ ಬಗ್ಗೆ ಅಲೆಮಾರಿಗಳು, ವಲಸಿಗರು ಹಾಗೂ ಕೊಳೆಗೇರಿಗಳಲ್ಲಿ ವಾಸಿಸುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜನಸಂಖ್ಯೆ ಹೆಚ್ಚಾದಷ್ಟು ಸೌಲಭ್ಯಗಳು ಕಡಿಮೆ ಆಗುತ್ತವೆ. ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಎಲ್ಲ ಕೇಂದ್ರಗಳಲ್ಲೂ ಈ ಕುರಿತು ಜಾಗೃತಿ ಮೂಡಿಸಬೇಕು’ ಎಂದರು.

‘ಜನಸಂಖ್ಯೆ ನಿಯಂತ್ರಣದ ಕುರಿತು ನಾವು ನಮ್ಮ ಸುತ್ತಮುತ್ತಲ ನಾಗರಿಕರಲ್ಲಿ ಅರಿವು ಮೂಡಿಸಬೇಕು’ ಎಂದು ಮಹಾನಗರ ಪಾಲಿಕೆ ಉಪಮೇಯರ್ ಲಕ್ಷ್ಮೀಶಂಕರ ನಾಯ್ಕ್ ಹೇಳಿದರು.

‘ಜನಸಂಖ್ಯೆ ನಿಯಂತ್ರಣ ನಮ್ಮೆಲ್ಲರ ಆದ್ಯ ಕರ್ತವ್ಯ. ಸಮತೋಲಿತ ಜೀವನ ನಡೆಸಲು ಜನಸಂಖ್ಯೆ ನಿಯಂತ್ರಣ ಅತ್ಯಗತ್ಯ’ ಎಂದು ಆರ್‌ಸಿಎಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ್ ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ, ನಗರ ಪ್ರಸೂತಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭೀಮಪ್ಪ, ಡಾ.ಹರ್ಷವರ್ಧನ್, ಎಫ್‍ಪಿಎ ಪ್ರತಿನಿಧಿ ಪುಷ್ಪಾ ಶೆಟ್ಟಿ, ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡವೀರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವೇಗದ ಜನಸಂಖ್ಯೆ ದೇಶದ ಪ್ರಗತಿಗೆ ಪೂರಕವಲ್ಲ ದೇಶದ ಜನಸಂಖ್ಯೆ 142 ಕೋಟಿ ದಾಟಿದೆ. ರಾಜ್ಯದ ಜನಸಂಖ್ಯೆ 7 ಕೋಟಿ ಸನಿಹದಲ್ಲಿದೆ. ಪ್ರತಿದಿನ 79726 ಹಾಗೂ ಪ್ರತಿ ಗಂಟೆಗೆ 3321 ಮಕ್ಕಳು ಜನಿಸುತ್ತಿದ್ದಾರೆ. ವೇಗದ ಜನಸಂಖ್ಯೆ ದೇಶದ ಪ್ರಗತಿಗೆ ಪೂರಕವಲ್ಲ. ಇದರಿಂದ ನಿರುದ್ಯೋಗ ಆಹಾರ ವಸತಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತವೆ. ರೂಢಿ ಸಂಪ್ರದಾಯ ಮೂಢನಂಬಿಕೆ ತೊರೆದು ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ನಾಗಲೀಕರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT