ಶಿವಮೊಗ್ಗ : ಸಮೀಪದ ಯಲವಟ್ಟಿ ಗ್ರಾಮದ ಜಗದ್ಗುರು ಸಚ್ಚಿದಾನಂದ ಗ್ರಾಮೀಣ ವಸತಿ ಪ್ರೌಢಶಾಲೆಗೆ ಈ ಸಾಲಿನಲ್ಲಿ ಪ್ರವೇಶ ಪಡೆಯುವ ಮೊದಲ 50 ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪ್ರವೇಶ ಮತ್ತು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಚಂದ್ರಶೇಖರಯ್ಯ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಕ್ಕಿನಕಲ್ಮಠದ ಶ್ರೀಗಳ ಆಶಯದಂತೆ 1986ರಲ್ಲಿ ಶಾಲೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು ಹಾಗೂ ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳಿಗೆ ಅನುಕೂಲವಾಗಲು ಈ ಶಾಲೆ ಆರಂಭಿಸಲಾಗಿದೆ’ ಎಂದರು.

ಈ ಶಾಲೆಯು ಗುರುಪುರ, ಪುರಲೆ, ವೆಂಕಟೇಶ ನಗರ, ಹಸೂಡಿ, ಯಲವಟ್ಟಿ, ಯಲವಟ್ಟಿ ತಾಂಡಾ, ಹೊಳೆಬೆನವಳ್ಳಿ, ಹಕ್ಕಿಪಕ್ಕಿ ಕ್ಯಾಂಪ್, ಶೆಟ್ಟಿಹಳ್ಳಿ ಭಾಗದ ಮಕ್ಕಳಿಗೆ ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಶೇ 100ರಷ್ಟು ಆಗಿದ್ದು, ಈ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತವೀರಪ್ಪ, ಪ್ರಮುಖರಾದ ಚಂದ್ರಪ್ಪ, ಶಿಕ್ಷಕರಾದ ಜೆ.ನಿಜಗುಣಾರಾಧ್ಯ, ರೂಪಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-867738363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.