ಶಿವಮೊಗ್ಗ: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೊಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮಾ ಆಗುವುದಿಲ್ಲ.

ಪ್ರತಿ ತಿಂಗಳು ಪದವೀಧರರಿಗೆ ₹ 3,000 ಹಾಗೂ ಡಿಪ್ಲೊಮಾ ಮಾಡಿದವರಿಗೆ ₹ 1,500 ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-804394038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.