ಶಿವಮೊಗ್ಗ: ಸಾಗರ ತಾಲ್ಲೂಕು ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಕೃಷಿ ಮತ್ತು ತೋಟಗಾರಿಗೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕರ ಹೆಸರು ನಾಮಕರಣ ಮಾಡಿರುವುದು ಅತ್ಯಂತ ಸಂಭ್ರಮದ ವಿಷಯ ಎಂದು ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗಾಂಧಿಬಜಾರ್ ಮುಂಭಾಗದ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಕೆಳದಿ ಶಿವಪ್ಪನಾಯಕರ ಹೆಸರು ಕರ್ನಾಟಕದ ಇತಿಹಾಸದಲ್ಲಿ ಅಚ್ಚಳಿ ಯದೇ ಉಳಿದಿದೆ. ಅವರದು ಶ್ರೇಷ್ಠ ಆಡಳಿತ. ರೈತರು ಯಾವ ಬೆಳೆಯನ್ನು ಬೆಳೆಯುತ್ತಾರೆ, ಇಳುವರಿ ಎಷ್ಟು ಎಂಬುದನ್ನು ಗಮನದಲ್ಲಿಟ್ಟುಕೊಂಡು ‘ಶಿಸ್ತು’ ಕಂದಾಯ ಪದ್ಧತಿ ಜಾರಿಗೆ ತಂದಿದ್ದರು. ಅವರ ಹೆಸರನ್ನು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಇಟ್ಟಿರುವುದು ಅರ್ಥಪೂರ್ಣ ಎಂದು ಶ್ಲಾಘಿಸಿದರು.

‘ಇರುವಕ್ಕಿಯಲ್ಲಿ ನಿರ್ಮಾಣವಾಗಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕರ ಹೆಸರು ನಾಮಕರಣ ಮಾಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಮಂತ್ರಿಗೆ ಮತ್ತು ಸಂಸದರಿಗೆ ಮನವಿ ನೀಡಿತ್ತು. ನಮ್ಮ ಮನವಿ ಪರಿಗಣಿಸಿ ಕೆಳದಿ ಶಿವಪ್ಪನಾಯಕರ ಹೆಸರು ಇಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಭಾ ಅಭಿನಂದನೆ ಸಲ್ಲಿಸುತ್ತದೆ.ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು, ಕೆಳದಿ ಚೆನ್ನಮ್ಮ ಅಥವಾ ಅಕ್ಕಮಹಾದೇವಿ ಹೆಸರು ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಟ್ಟರೂ ಸ್ವಾಗತಿಸುತ್ತೇವೆ’ ಎಂದರು.

ಇತಿಹಾಸ ತಜ್ಞ ಖಂಡೋಬರಾವ್, ಮಲೆನಾಡಿನ ಇತಿಹಾಸ, ಶಿವಪ್ಪ ನಾಯಕರ ಆಡಳಿತದ ಮಾಹಿತಿ ನೀಡಿದರು.

ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ವೀರಶೈವ ಮುಖಂಡರಾದ ರುದ್ರಮುನಿ ಸಜ್ಜನ್, ಎಸ್.ಎಸ್.ಜ್ಯೋತಿ ಪ್ರಕಾಶ್, ಅನಿತಾ ರವಿಶಂಕರ್, ಮಹೇಶ್, ಆನಂದಮೂರ್ತಿ, ಕತ್ತಿಗೆ ಚನ್ನಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.