ಗುರುವಾರ , ಜನವರಿ 28, 2021
18 °C

ಶಾರ್ಟ್ ಸರ್ಕೀಟ್‌: ಬೇಕರಿಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೀರ್ಥಹಳ್ಳಿ: ಪಟ್ಟಣದಲ್ಲಿ ಶುಕ್ರವಾರ ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಫ್ರಿಜ್‌ ಸ್ಫೋಟಗೊಂಡು ಬೇಕರಿ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಆಗುಂಬೆ ರಸ್ತೆ ಮಾರ್ಗದ ಕಾಮತ್ ಬೇಕರಿಯಲ್ಲಿ ಅನಾಹುತ ಸಂಭವಿಸಿದ್ದು, ಅಪಾರ ಹಾನಿಯಾಗಿದೆ. ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ದೋಷ ಘಟನೆಗೆ ಕಾರಣವಾಗಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೇಕರಿಯಲ್ಲಿನ ಪೀಠೋಪಕರಣ, ತಿಂಡಿ, ದಿನಸಿ ಸಾಮಗ್ರಿ, ಅಡುಗೆ ಅನಿಲ, ಸಿಲಿಂಡರ್ ಸುಟ್ಟುಹೋಗಿವೆ. ಸ್ಫೋಟದ ತೀವ್ರತೆಗೆ ಗೋಡೆ ಬಿರುಕು ಬಿಟ್ಟಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು