ಸೊರಬ: ‘ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಮೂಲ ಸೌಕರ್ಯ ಹಾಗೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ ತಿಳಿಸಿದರು.

ಪಟ್ಟಣದ ಪದವಿಪೂರ್ವ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ– ನಮ್ಮ ಜವಾಬ್ದಾರಿ’ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಏಳೆಂಟು ತಿಂಗಳಿಂದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಮೂಲ ಸೌಕರ್ಯ ನೀಡಲು ಒತ್ತು ನೀಡಿದ್ದಾರೆ. ಹಳೆಯ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಲು ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಶೀರ್ಷಿಕೆಯಡಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ’ ಎಂದು ಹೇಳಿದರು.

‘ತಾಲ್ಲೂಕಿನಲ್ಲಿ ಹಳೆಯ ವಿದ್ಯಾರ್ಥಿಗಳಿಂದ ₹5 ಕೋಟಿ ಹಣ ಸಂಗ್ರಹವಾಗಿದೆ. ತಾಲ್ಲೂಕಿನ ಶಾಲೆಗಳ ಫಲಿತಾಂಶ ಉತ್ತಮವಾಗಿ ಬಂದಿದೆ. ಎಲ್ಲ ಶಿಕ್ಷಕರೂ ಗುಣಮಟ್ಟದ ಶಿಕ್ಷಣ ನೀಡುತ್ತಾರೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಬೇಕು’ ಎಂದರು.

ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಸುರೇಶಪ್ಪ, ಎಸ್ಡಿಎಂಸಿ ಅಧ್ಯಕ್ಷ ಯುವರಾಜ್, ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ಕೆ.ಸಿ. ಶ್ರೀಕಾಂತ ಮಾತನಾಡಿದರು. ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಫಕೀರಪ್ಪ, ಸಮನ್ವಯಾಧಿಕಾರಿ ದಯನಂದ ಕಲ್ಲೇರ, ಮುಖ್ಯಶಿಕ್ಷಕರಾದ ಮಾರುತಿ, ಬಿ.ನಾಗರಾಜ್, ರಮೇಶ್, ಕೆರೆಯಪ್ಪ, ಇಸಿಒ ಸಂಜೀವ್ಕುಮಾರ, ರಾಘವೇಂದ್ರ, ಅರುಣ್ ಕುಮಾರ್, ಸುಧಾ ಸೇರಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.