ಶಿವಮೊಗ್ಗ: ದೇವರಾಜ ಅರಸು ಅವರ ದಾಖಲೆಯ ಸರಿಗಟ್ಟಿ ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾದ ಹಿನ್ನೆಲೆಯಲ್ಲಿ ಮಂಗಳವಾರ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿ ಸಂಭ್ರಮಾಚರಣೆ ಮಾಡಿದರು.

ನಗರದ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಮತ್ತು ವಿವಿಧೆಡೆ 5,000ಕ್ಕೂ ಹೆಚ್ಚು ಜನರಿಗೆ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿ ಸಂಭ್ರಮಿಸಿದರು. ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು. ಅವರು ಜಾರಿಗೆ ತಂದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಪಟಾಕಿ ಸಿಡಿಸಿ ಖುಷಿಪಟ್ಟರು. 30 ಅಡಿಯ ಕಟೌಟ್ಗೆ ಪುಷ್ಪವೃಷ್ಟಿ ಮಾಡಿದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಆಶೀರ್ವಾದ ಇದೆ. ಎಲ್ಲಾ ಮುಖ್ಯಮಂತ್ರಿಗಳಿಗಿಂತ ಹೆಚ್ಚಿನ ಅವಧಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಅವರು 16 ಬಾರಿ ಬಜೆಟ್ ಮಂಡನೆ ಮಾಡಿ ತಾವೊಬ್ಬ ಅತ್ಯುತ್ತಮ ಅರ್ಥಶಾಸ್ತ್ರಜ್ಞ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಜಾರಿ ಮೂಲಕ ಬಡವರಿಗೆ ಉಚಿತ ಅಕ್ಕಿ, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳ ಮೂಲಕ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಕೆ. ರಂಗನಾಥ್ ಮಾತನಾಡಿ, ಎಲ್ಲ ಜಾತಿಯ ಬಡವರು, ಹಿಂದುಳಿದವರು ಹಾಗೂ ದಲಿತರ ಏಳಿಗೆಗೆ ದುಡಿದ ಸಿದ್ದರಾಮಯ್ಯ ಅವರ ಅಧಿಕಾರಾವಧಿ ನಾಡಿನ ರಾಜಕೀಯ ಇತಿಹಾಸದಲ್ಲಿ ಸ್ಮರಣೀಯ ಎಂದು ಹೇಳಿದರು.

ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್, ಆರ್.ಸಿ. ನಾಯ್ಕ, ನಾಗರಾಜ್ ಕಂಕಾರಿ, ಕಲೀಂ ಪಾಷಾ, ಎಚ್.ಪಿ. ಗಿರೀಶ್, ಸೈಯದ್ ವಾಹಿದ್ ಅಡ್ಡು, ಸುವರ್ಣಾ ನಾಗರಾಜ್, ಪಾಲಾಕ್ಷಿ, ಲೋಕೇಶ್, ವಿನಯ್ ತಾಂಡ್ಲೆ, ಶಿವಾನಂದ್, ವಿನೋದ್, ಡಾ.ಶರತ್ ಮರಿಯಪ್ಪ, ದರ್ಶನ್, ಅಜೀಜ್ ಅಹಮ್ಮದ್, ಸಂತೋಷ್, ಆರೀಫ್, ರೇಖಾ ರಂಗನಾಥ್, ಕುಮರೇಶ್, ಪವನ್, ರಾಕೇಶ್, ಗುರುಪ್ರಸಾದ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.