ಭಾನುವಾರ, ಏಪ್ರಿಲ್ 2, 2023
24 °C

ಗ್ರಹಣ: ದೇವಿ ದರ್ಶನಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮರಿ: ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ನ. 8ರಂದು ದರ್ಶನ, ಪೂಜೆ, ಪ್ರಸಾದ ವಿನಿಯೋಗ, ವಿಶೇಷ ಸೇವೆಗಳು ಮಧ್ಯಾಹ್ನ 1ರಿಂದ ರಾತ್ರಿ 7ರ ವರೆಗೆ ಸ್ಥಗಿತಗೊಳ್ಳಲಿದೆ. ಈ ಸಮಯದಲ್ಲಿ ದೇವಿಯ ದರ್ಶನಕ್ಕೆ ಅವಕಾಶ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ನ. 9ರಂದು ಬೆಳಿಗ್ಗೆ 4ಕ್ಕೆ ಆಲಯ ಶುದ್ಧಿಯೊಂದಿಗೆ ದೇವಿಯ ದರ್ಶನಕ್ಕೆ ಅವಕಾಶವಿದ್ದು, ಭಕ್ತರು ಸಹಕರಿಸುವಂತೆ ಸಿಗಂದೂರು ದೇವಸ್ಥಾನದ ಅನುವಂಶಿಕ ಧರ್ಮಾಧಿಕಾರಿ ಡಾ.ಎಸ್.ರಾಮಪ್ಪ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು