ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಮಾರ್ಚ್ 2ರಂದು ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ.

ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು, ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಪಕ್ಷಾತೀತವಾಗಿ ನಡೆಯಲಿರುವ ಹೆದ್ದಾರಿ ತಡೆ ಚಳವಳಿಯಲ್ಲಿ ಸಂತ್ರಸ್ತರು ಸೇರಿದಂತೆ ರೈತರ ಬಗ್ಗೆ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಮುಖರಾದ ಅಶೋಕ್ ಬೇಸೂರು,ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.