ಭಾನುವಾರ, ಜೂಲೈ 12, 2020
29 °C

ಸಾಗರ: ಸಿಗಂದೂರು ಕ್ಷೇತ್ರಕ್ಕೆ ಬರದಿರಲು ಭಕ್ತರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಕೋವಿಡ್-19ರ ಸಂಕಷ್ಟ ಮುಗಿಯುವವರೆಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಆಗಮಿಸಬಾರದು ಎಂದು ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ರವಿ ಸಿಗಂದೂರು ಹಾಗೂ ತುಮರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಈಗಾಗಲೇ ದೇವಾಲಯದ ಬಾಗಿಲು ಮುಚ್ಚಿದ್ದರೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬಂದು ದೇವಸ್ಥಾನದ ಹೊರಗೆ ಕೈಮುಗಿದು ಮರಳುತ್ತಿದ್ದಾರೆ. ಇದರಿಂದಾಗಿ ಸಿಗಂದೂರಿಗೆ ಬರುವ ಲಾಂಚ್‌ನಲ್ಲಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಿಗಂದೂರಿಗೆ ಪ್ರವಾಸಿಗರು ಬರಲು ಕೆಲವು ನಿರ್ಬಂಧಗಳನ್ನು ಜಿಲ್ಲಾಡಳಿತ ಹೇರಬೇಕು ಎಂದು ಅವರು ಮನವಿ ಮಾಡಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು