ತುಮರಿ (ಶಿವಮೊಗ್ಗ): ‘ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ’ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಪ್ರತಿದಿನ ದೇವಿಗೆ ಪ್ರಾತಃಕಾಲ ಪೂಜೆ, ತೈಲಾಭಿಷೇಕ, ಶೈಲಪುತ್ರಿ ಆರಾಧನೆ, ಶುದ್ಧಿ ಪುಣ್ಯಾಹ, ಗಣಹೋಮ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅಲಂಕಾರ ಪೂಜೆ ನಡೆಯಲಿದೆ.

ನವರಾತ್ರಿ ಉತ್ಸವದ ಪ್ರಯುಕ್ತ ದೇವಿಗೆ ಪ್ರತಿನಿತ್ಯ ದುರ್ಗಾ ಹವನ, ಚಂಡಿಕಾ ಹೋಮ, ನವಚಂಡಿಕಾ ಹೋಮ, ಗುರುಗಳ ಆರಾಧನೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ನೈವೇದ್ಯ, ರಾತ್ರಿ 7.30 ರಿಂದ ದೀಪೋತ್ಸವ, 8ರಿಂದ ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ ಜರುಗಲಿದೆ. ಧರ್ಮಾಧಿಕಾರಿ ಎಸ್.ರಾಮಪ್ಪ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ವಸತಿ ವ್ಯವಸ್ಥೆ, ದರ್ಶನ, ನಿತ್ಯ ಪೂಜೆಯಲ್ಲಿ ಬದಲಾವಣೆ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.