ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗಂದೂರು: ವರದಿ ಸಲ್ಲಿಕೆಗೆ ಆದೇಶ

Last Updated 18 ಡಿಸೆಂಬರ್ 2020, 19:59 IST
ಅಕ್ಷರ ಗಾತ್ರ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಹೆಸರಲ್ಲಿ ಅರಣ್ಯಭೂಮಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಸಂಬಂಧ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಸಾಗರ ತಾಲ್ಲೂಕಿನ ಲಕ್ಷ್ಮೀನಾರಾಯಣ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅರಣ್ಯ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.

‘ಈ ಹಿಂದೆ ಕಾಮಗಾರಿ ನಿಂತಿದೆ ಎಂದು ಕೇಳಿದ್ದೆ. ಈಗ ಗೊತ್ತಿಲ್ಲ’ ಎಂದು ಅರ್ಜಿದಾರರ ಪರ ವಕೀಲ ಪಿ.ಪಿ. ಹೆಗ್ಡೆ ಹೇಳಿದರು. ಮಧ್ಯ ಪ್ರವೇಶಿಸಿದ ಪೀಠ, ಕಾಮಗಾರಿ ನಿಲ್ಲಿಸಲಾಗಿದೆಯೇ ಎಂಬುದನ್ನು ಫೋಟೋ ಸಹಿತ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿತು.

ಈ ಹಿಂದೆ ನ್ಯಾಯಾಲಯ ನೀಡಿರುವ ಆದೇಶದಂತೆ, ಸ್ಥಳದ ಸರ್ವೆ ನಡೆಸಿ ಸರ್ಕಾರಿ ಭೂಮಿ ಒತ್ತುವರಿ ಮಾಡ
ಲಾಗಿದೆಯೇ ಎಂಬುದರ ಕುರಿತು ಮುಂದಿನ 3 ವಾರಗಳಲ್ಲಿ ಜಿಲ್ಲಾಧಿಕಾರಿ ವರದಿ ನೀಡಬೇಕು. ಮತ್ತಷ್ಟು ಕಾಲಾವ
ಕಾಶ ನೀಡಲಾಗುವುದಿಲ್ಲ ಎಂದು ಸೂಚಿಸಿ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು.

‘ಶಿವಮೊಗ್ಗದ ಸಾಗರ ತಾಲ್ಲೂಕಿನ ಕಸವಳ್ಳಿ ಗ್ರಾಮದ ಸರ್ವೆ ನಂಬರ್ 65ರಲ್ಲಿನ ಸರ್ಕಾರಿ ಅರಣ್ಯ ಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಲಾಗಿದೆ. ಅರಣ್ಯ ಭೂಮಿಯನ್ನು ತೆರವು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ದೇವಸ್ಥಾನದ ಆಡಳಿತವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವಂತೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT