ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ | ವಿದ್ಯಾರ್ಥಿಗಳ ಕೋಟ್ ಮೇಲೆ ಶಿಲುಬೆ ಚಿಹ್ನೆ: ತೆಗೆಸಲು ಒತ್ತಾಯ

Published 6 ಸೆಪ್ಟೆಂಬರ್ 2023, 15:34 IST
Last Updated 6 ಸೆಪ್ಟೆಂಬರ್ 2023, 15:34 IST
ಅಕ್ಷರ ಗಾತ್ರ

ಸಾಗರ: ಮಂಕಳಲೆ ರಸ್ತೆಯಲ್ಲಿರುವ ಬೆಥನಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳು ಧರಿಸುವ ಕೋಟ್ ಮತ್ತು ಟೈ ಮೇಲೆ ಶಿಲುಬೆ ಚಿಹ್ನೆ ಇದ್ದು, ಅದನ್ನು ತೆಗೆಸುವಂತೆ ಒತ್ತಾಯಿಸಿ ಇಲ್ಲಿನ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಶಾಲೆಯಲ್ಲಿ ಎಲ್ಲಾ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಓದಲು ಬರುತ್ತಾರೆ. ಹೀಗಿರುವಾಗ ಧರ್ಮವೊಂದರ ಚಿಹ್ನೆಯನ್ನು ಮಕ್ಕಳ ಸಮವಸ್ತ್ರದ ಮೇಲೆ ಹಾಕುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

‘ಈಚೆಗೆ ಬೆಥನಿ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ ಸಂದರ್ಭದಲ್ಲಿ ಮಕ್ಕಳು ಕಟ್ಟಿಕೊಂಡ ರಾಖಿಯನ್ನು ಶಿಕ್ಷಕರು ತೆಗೆಸಿರುವ ಘಟನೆ ನಡೆದಿದೆ. ಇದೊಂದು ಧರ್ಮ ವಿರೋಧಿ ಕೃತ್ಯವಾಗಿದೆ. ಪೋಷಕರು ಈ ಕೃತ್ಯವನ್ನು ಖಂಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೂಡ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ವಿಚಾರಣೆ ನಡೆಸಬೇಕು’ ಎಂದು ಸದಸ್ಯರು ಆಗ್ರಹಿಸಿದರು.

ಪ್ರಮುಖರಾದ ಕೆ.ಎಚ್. ಸುಧೀಂದ್ರ, ಕೋಮಲ್ ರಾಘವೇಂದ್ರ, ಶ್ರೀಧರ್ ಸಾಗರ್, ರಾಘವೇಂದ್ರ ಕಾಮತ್, ಆಟೋ ಗಣೇಶ್, ಸಂತೋಷ್, ಅಶೋಕ್, ಉದಯ, ಆದಿತ್ಯ, ವಿನಯ್ ಶೇಟ್ ಇದ್ದರು.

ದೂರು 

ಸನಾತನ ಧರ್ಮದ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರ ಠಾಣೆ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT