ಗುರುವಾರ , ಜನವರಿ 27, 2022
27 °C

ಎಳ್ಳಮಾವಾಸ್ಯೆ: ರಾಮತೀರ್ಥದಲ್ಲಿ ಸಡಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಿಪ್ಪನ್‌ಪೇಟೆ: ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀಕ್ಷೇತ್ರ ರಾಮತೀರ್ಥದ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು.

ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದು, ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ.ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ ಹವನ ಮತ್ತು ವಿಶೇಷ ಪೂಜೆ ನಡೆದವು.

ಹಾಲಂದೂರು ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಭಕ್ತರಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ಹೊಳೆ ದೀಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ವೈ.ಜಯಂತ್, ಅಧ್ಯಕ್ಷ ಅಚ್ಯುತಾಚಾರ್, ಕಾರ್ಯದರ್ಶಿ ಕರುಣಾಕರ, ಖಜಾಂಚಿ ಗಂಗಾಧರ ಮತ್ತು ಎಲ್. ಶೇಖರಪ್ಪ ಮತ್ತು ಸಮಿತಿ ಸದಸ್ಯರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.