ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ತುರ್ತು ಕರೆ ಮಾಡಲು ಇಡೀ ದೇಶಕ್ಕೆ ಒಂದೇ ಸಂಖ್ಯೆ- ಆರಗ ಜ್ಞಾನೇಂದ್ರ

Last Updated 24 ಆಗಸ್ಟ್ 2021, 13:38 IST
ಅಕ್ಷರ ಗಾತ್ರ

ಶಿವಮೊಗ್ಗ: ಸಹಾಯಕ್ಕಾಗಿ ಪೊಲೀಸರಿಗೆ ತುರ್ತು ಕರೆ ಮಾಡಲು ಇಡೀ ದೇಶಕ್ಕೆ ಒಂದೆ ರೀತಿಯ ಸಂಖ್ಯೆ ನಿಗದಿ ಮಾಡಲು ಚರ್ಚೆ ನಡೆದಿದೆ. ಕರೆ ಬಂದ ಐದು ನಿಮಿಷದಲ್ಲಿ ಸ್ಥಳ ತಲುಪಬೇಕಿದೆ. ಅದಕ್ಕಾಗಿ ಅಗತ್ಯ ವಾಹನಗಳು, ತರಬೇತಿ ಪಡೆದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಐದು ವರ್ಷ ಸೇವೆ ಸಲ್ಲಿಸಿದ ಎಎಸ್‌ಐಗಳಿಗೆ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗೆ ಬಡ್ತಿ ನೀಡಲಾಗುತ್ತಿದೆ. ಸೇವಾವಧಿ ಮೂರು ವರ್ಷಗಳಿಗೆ ಮಿತಿಗೊಳಿಸಬೇಕು ಎನ್ನುವ ಬೇಡಿಕೆ ಇದೆ. ಒಂದೇ ಸ್ಥಳದಲ್ಲಿ ಹಲವು ವರ್ಷ ಠಿಕಾಣಿ ಹೂಡಿರುವ ಪೊಲೀಸರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಪೊಲೀಸರಿಗೂ ಉತ್ತಮ ವಸತಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗುವುದು. ಮೀಸಲು ಪೊಲೀಸರಿಗೂ ಸಿವಿಲ್‌ ಸೇವೆ ಸಲ್ಲಿಸುವ ಅವಕಾಶ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ. ರಾಜ್ಯಗುಪ್ತ ವಾರ್ತೆ ಬಲಪಡಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT