ಶನಿವಾರ, ಮೇ 28, 2022
30 °C

ಜ.18,19ಕ್ಕೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ಪಟ್ಟಣದಲ್ಲಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವನ್ನು ಜ. 18, 19ರಂದು ನಡೆಸಲು ಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ ಮಂಗಳವಾರ ನಡೆದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಮಾರಿಕಾಂಬಾ ದೇವಸ್ಥಾನ ಸಮಿತಿ ಪದಾಧಿಕಾರಿ ಹಾಗೂ ಬಿಜೆಪಿ ಮುಖಂಡ ಭದ್ರಾಪುರ ಹಾಲಪ್ಪ, ‘ಮಾರಿಕಾಂಬಾ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಸಹಕಾರ ನೀಡಬೇಕು. ಮಾರಿಕಾಂಬಾ ದೇವಿ ದೇವಸ್ಥಾನದ ಈ ಭೂಮಿಯನ್ನು ದೇವಸ್ಥಾನ ಸಮಿತಿ ಹೆಸರಿಗೆ ಖಾತೆ ಮಾಡಲು ಸಹಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರಿಗೆ ದೇವಸ್ಥಾನ ಸಮಿತಿ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ’ ಎಂದು ಹೇಳಿದರು.

ಕಳೆದ ಬಾರಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಪುರಸಭೆ ಕಾಂಗ್ರೆಸ್ ಸದಸ್ಯ ಹುಲ್ಮಾರ್ ಮಹೇಶ್ ಅವರನ್ನು ಈ ಬಾರಿಯ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹಾಗೂ ಕುಸ್ತಿ ಕಮಿಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಜೆ. ಸುಕೇಂದ್ರಪ್ಪ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಹುಲ್ಮಾರ್ ಮಹೇಶ್ ಮಾತನಾಡಿ, ‘ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ನಡೆಯುವ ಮಹೋತ್ಸವವಾಗಿದೆ. ಪಟ್ಟಣದ ನಾಗರಿಕರು ಜಾತ್ರಾ ಮಹೋತ್ಸವ ಯಶಸ್ವಿ
ಗೊಳಿಸಲು ಸಹಕಾರ ನೀಡಬೇಕು. ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯುವ ಕಾರ್ಯಗಳಲ್ಲಿ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು. ‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ತಾಲ್ಲೂಕು ಕುರುಬ ಸಮಾಜ ಅಧ್ಯಕ್ಷ ಕಬಾಡಿ ರಾಜಣ್ಣ, ಮಾರಿಕಾಂಬಾ ದೇವಸ್ಥಾನ ಸಮಿತಿ ಪದಾಧಿಕಾರಿಗಳಾದ ಹೊಲಗಾವಲು ಮಲ್ಲಪ್ಪ, ಪಾತ್ರೆ ರಾಜಪ್ಪ, ಪಾರಿವಾಳ ಶಿವಶಂಕರಪ್ಪ, ಶಿವನಗೌಡ್ರು, ಪರಮೇಶ್ವರಪ್ಪ, ವಿವಿಧ ಸಮಾಜದ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.