ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಸ್ಥರಿಗೆ ಬೆದರಿಕೆ, ಪೊಲೀಸ್ ಭದ್ರತೆ

ಶಿವಮೊಗ್ಗ: ಇಲ್ಲಿನ ಭರ್ಮಪ್ಪ ಬೀದಿಯ ನಿವಾಸಿ ಪ್ರಕಾಶ್ ಎಂಬುವವರ ಮೇಲೆ ಸೋಮವಾರ ತಡರಾತ್ರಿ ಗುಂಪೊಂದು ಹಲ್ಲೆ ನಡೆಸಿದೆ.
ಸ್ನೇಹಿತನನ್ನು ಕಳುಹಿಸಿ ವಾಪಸ್ ಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಅನ್ಯ ಕೋಮಿನ ಯುವಕರ ಗುಂಪು ಹಲ್ಲೆ ನಡೆಸಿತು. ಈ ವೇಳೆ ಅವರು ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿದರು ಎಂದು ಪ್ರಕಾಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆಯಿಂದ ಪ್ರಕಾಶ್ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಈ ಮಧ್ಯೆ ಈಚೆಗೆ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ ಮನೆಯ ಬಳಿಯ ರಸ್ತೆಯಲ್ಲಿ ಗುಂಪೊಂದು ಕೂಗಾಡುತ್ತ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ಈ ಘಟನೆಗಳ ನಿಮಿತ್ತ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ
ದಾಖಲಾಗಿವೆ.
ಬಿಗಿ ಭದ್ರತೆ: ಹಲ್ಲೆ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೀಗೆಹಟ್ಟಿ ಸೇರಿದಂತೆ ಹಳೆಯ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಗಳು ಬೀಡುಬಿಟ್ಟಿವೆ. ಬೈಕ್‌ನಲ್ಲಿ ತ್ರಿಬಲ್ ರೈಡ್ ಹೋಗುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
‘ಪ್ರಕಾಶ್ ಮೇಲೆ ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮೂವರನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಎಸ್.ಪಿ ಮಿಥುನ್‌ಕುಮಾರ್ ‘ಪ್ರಜಾವಾಣಿ‘ಗೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.