ಶನಿವಾರ, ಜುಲೈ 24, 2021
26 °C

ಶಿವಮೊಗ್ಗ: ಅನುಷ್ಠಾನ ಸಮಿತಿಗೆ ವಾರ್ಡ್‌ ಸದಸ್ಯರನ್ನೇ ನೇಮಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ವಾರ್ಡ್‌ ಸದಸ್ಯರನ್ನೇ ಅನುಷ್ಠಾನ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರಪಾಲಿಕೆ ವಿರೋಧ ಪಕ್ಷದ ಸದಸ್ಯರು ಸಂಸದ  ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ನಗರದಲ್ಲಿ 35 ವಾರ್ಡ್‌ಗಳಿವೆ. ಸ್ಮಾರ್ಟ್‌ಸಿಟಿಯಲ್ಲಿ 11 ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆಗೆ ಸದಸ್ಯರನ್ನು ನೇಮಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಐವರನ್ನು ಸಲಹಾ ಸಮಿತಿ ಸದಸ್ಯರನ್ನು ಈಗಾಗಲೇ ನೇಮಕ ಮಾಡಲಾಗಿದೆ. ಅನುಷ್ಠಾನ ಸಮಿತಿ ಸದಸ್ಯರ ವಾರ್ಡ್‌ಗಳಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿಲ್ಲ. ಬೇರೆ ವಾರ್ಡ್‌ಗಳ ಸದಸ್ಯರಿಗೆ ಈ ವಾರ್ಡ್‌ಗಳ  ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಯ ಅರಿವಿಲ್ಲ. ಇದುವರೆಗೂ

ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್‌.ಸಿ.ಯೋಗೀಶ್, ಕಾಂಗ್ರೆಸ್, ಜೆಡಿಎಸ್ ಸದಸ್ಯರಾದ ನಾಗರಾಜ್ ಕಂಕಾರಿ, ಯಮುನಾ ರಂಗೇಗೌಡ, ಮೆಹರಿಕ್ ಷರೀಫ್ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು