ಸೊರಬ: ‘ಮುಂಗಾರು ಹಂಗಾಮಿಗೆ ತಾಲ್ಲೂಕಿನ ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ತೊಂದರೆ ಆಗದಂತೆ ಅಧಿಕಾರಿಗಳು ಹಾಗೂ ಮಾರಾಟಗಾರರು ಮುನ್ನೆಚ್ಚರಿಕೆ ವಹಿಸಬೇಕು. ಪಾರದರ್ಶಕತೆ ಕಾಯ್ದುಕೊಳ್ಳಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಕೆ.ಜಿ. ಹೇಳಿದರು.

ತಾಲ್ಲೂಕಿನ ಸ್ತ್ರೀಶಕ್ತಿ ಭವನದಲ್ಲಿ ಕೃಷಿ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ಕೃಷಿ ಪರಿಕರ ಮಾರಾಟಗಾರರಿಗೆ ಸಮತೋಲನ ರಸಗೊಬ್ಬರ ಬಳಕೆ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಸಹಕಾರ ಸಂಘಗಳ ಮೂಲಕ ರಸಗೊಬ್ಬರ ಮಾರಾಟ ಚುರುಕುಗೊಳಿಸಬೇಕು. ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ವಿಳಂಬವಾಗಬಾರದು. ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಕಡ್ಡಾಯವಾಗಿದ್ದು, ಕಂಪನಿಗಳಿಂದ ರಸಗೊಬ್ಬರ ಬಿಡುಗಡೆಯಾದ ತಕ್ಷಣ, ಅದು ಪಾಯಿಂಟ್ ಆಫ್ ಸೇಲ್ ಯಂತ್ರಗಳಲ್ಲಿ ಸರಿಯಾಗಿ ದಾಖಲಾಗುತ್ತಿದೆಯೇ ಎಂಬುದನ್ನು ಕಟ್ಟು ನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು’ ಎಂದರು.

‘ತಾಲ್ಲೂಕಿನಲ್ಲಿ ಒಟ್ಟು 107 ರಸಗೊಬ್ಬರ ಮಾರಾಟಗಾರರಿದ್ದು, ಇದರಲ್ಲಿ 80 ಮಳಿಗೆಗಳು ಸಕ್ರಿಯವಾಗಿವೆ. 22 ಸಹಕಾರಿ ಸಂಘಗಳ ಮಾರಾಟಗಾರರಿದ್ದಾರೆ. ಮುಂಗಾರು ಹಂಗಾಮಿಗೆ ತಕ್ಕಷ್ಟು ರಸಗೊಬ್ಬರ ದಾಸ್ತಾನಿದೆ. ಕೃಷಿ ಚಟುವಟಿಕೆ ಆರಂಭವಾಗುತ್ತಲೇ ಹಂತ ಹಂತವಾಗಿ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.

ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕು. ತಾಲ್ಲೂಕಿಗೆ ಸರಬರಾಜಾಗುವ ರಸಗೊಬ್ಬರವನ್ನು ಕಂಪನಿಗಳು ಡೀಲರ್ಗಳಿಗೆ ಹಂಚಿಕೆ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವ ಡೀಲರ್ಗೆ ಎಷ್ಟು ಪ್ರಮಾಣದ ಗೊಬ್ಬರ ಹಂಚಿಕೆಯಾಗಿದೆ ಎಂಬ ಮಾಹಿತಿಯನ್ನು ಕೃಷಿ ಇಲಾಖೆಗೆ ಮುಂಚಿತವಾಗಿ ಸಲ್ಲಿಸಬೇಕು. ಕೆಲವು ಡೀಲರ್ಗಳು ಅಥವಾ ಮಧ್ಯವರ್ತಿಗಳು ರಸಗೊಬ್ಬರವನ್ನು ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟಬೇಕು. ಈ ನಿಟ್ಟಿನಲ್ಲಿ ತೀವ್ರ ನಿಗಾವಹಿಸಬೇಕು. ಯಾವುದೇ ಹಂತದಲ್ಲಿ ಭ್ರಷ್ಟಾಚಾರ, ನಿರ್ಲಕ್ಷ್ಯ ಕಂಡುಬಂದಲ್ಲಿ ಅಂತಹ ಮಾರಾಟಗಾರರ ಪರವಾನಗಿ ರದ್ದುಗೊಳಿಸಲಾಗುವುದು’ ಎಂದು ತಹಶೀಲ್ದಾರ್ ಪುರಂದರ್ ಕೆ. ತಿಳಿಸಿದರು.

ಕೃಷಿಕ ಸಮಾಜದ ಅಧ್ಯಕ್ಷ ಸುರೇಶ್ ಕೆ.ಜಿ, ಉಪಾಧ್ಯಕ್ಷ ರೇವಣಪ್ಪ ಎಸ್.ಎಂ, ಮಾರಾಟಗಾರರ ಸಂಘದ ಅಧ್ಯಕ್ಷ ಹನುಮಂತಪ್ಪ ಯಲಸಿ, ಕೃಷಿ ಅಧಿಕಾರಿಗಳಾದ ಕಾಂತರಾಜು ಎನ್, ನೇಮಚಂದ್ರ ಎಸ್.ಬಿ, ವಿಜಯ್ ಕುಮಾರ್ ಬಿ.ವಿ, ಧನಂಜಯಪ್ಪ ಎಸ್, ರಮೇಶ್ ಕುಲಕರ್ಣಿ, ಸಂಜೀವ ಎಂ.ಬಿ, ಪೂರ್ಣಿಮಾ ಆರ್.ಎನ್ ಸೇರಿ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-42-1578741869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.