ಸೊರಬ: ‘ಏಷ್ಯಾದಲ್ಲಿಯೇ ಅತಿ ಹೆಚ್ಚು ಕೆರೆಗಳನ್ನು ಹೊಂದಿರುವ ಸೊರಬ ತಾಲ್ಲೂಕಿನಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಕಂದಾಯ ಇಲಾಖೆ ಸಜ್ಜಾಗಿದ್ದು, ಈಗಾಗಲೇ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ತಹಶೀಲ್ದಾರ್ ಪುರಂದರ್ ಕೆ. ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ತಾಲ್ಲೂಕಿನಲ್ಲಿ 1,204 ಕೆರೆಗಳಿವೆ. ಈ ಪೈಕಿ 188 ಕೆರೆಗಳು ಒತ್ತುವರಿಯಾಗಿದ್ದು, ತೆರವು ಕಾರ್ಯಕ್ಕೆ ಇಲಾಖೆ ಕ್ರಮ ಕೈಗೊಂಡಿದೆ. ಕೆರೆಗಳನ್ನು ಒತ್ತುವರಿ ಮಾಡಿರುವ ಕುರಿತು ಭೂಮಾಪನ ಇಲಾಖೆಗೆ ಈಗಾಗಲೇ ವರದಿ ಸಲ್ಲಿಸಲಾಗಿದೆ. ಕಂದಾಯ ಸಚಿವರು ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದು, ತೆರವು ಕಾರ್ಯಾಚರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜಲ ಅಕ್ಷಯ ಪಾತ್ರೆಯಂತಿರುವ ಕೆರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕೆಲಸ ಇಲಾಖೆಯದ್ದು. ಅಂತರ್ಜಲ ವೃದ್ಧಿಸುವಲ್ಲಿ ಅವುಗಳ ರಕ್ಷಣೆ ತ್ವರಿತಗತಿಯಲ್ಲಿ ನಡೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು.

‘ಇನ್ನೇನು ಮಳೆಗಾಲ ಆರಂಭಗೊಳ್ಳಲಿದ್ದು, ಕೆರೆಗಳ ಅಂಚಿನಲ್ಲಿ ಕೆಲವು ರೈತರು ಒತ್ತುವರಿ ಮಾಡಿ ದಿಮ್ಮೆ ಹಾಕಿಕೊಂಡಿದ್ದು, ಮಳೆ ನೀರು ಕೆರೆಗಳಿಗೆ ಹಾಯುತ್ತಿಲ್ಲ. ಸ್ವಾಭಾವಿಕವಾಗಿ ನೀರು ಹರಿಯುವ ಕಾಲುವೆಗಳನ್ನು ಮುಚ್ಚಿದ್ದಾರೆ. ಇದರಿಂದ ಕೆರೆಯಲ್ಲಿ ನೀರು ಸಂಗ್ರಹವಾಗದೆ ಬೇಸಿಗೆ ಆರಂಭದಲ್ಲಿ ಕೆರೆಗಳು ಬತ್ತಲಾರಂಭಿಸಿವೆ. ಈಗಾಗಲೇ ಒತ್ತುವರಿಯಾದ ಕೆರೆಗಳ ಸರ್ವೆ ಕಾರ್ಯ ನಡೆಸಲಾಗಿದ್ದು, ಅವುಗಳ ತೆರವು ಕಾರ್ಯ ನಡೆಸಿ ಆಯಾ ಇಲಾಖೆಗೆ ವಹಿಸಲಾಗುವುದು. ಮುಂದೆ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳುವುದು ಆಯಾ ಇಲಾಖೆಗಳ ಜವಾಬ್ದಾರಿಯಾಗಿದೆ’ ಎಂದರು.

‘ಕೆರೆಗಳ ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ರೈತರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಉಪಕರಣ ಅಳವಡಿಸಿ ನೀರಿನ ಗುಣಮಟ್ಟ ಪರೀಕ್ಷಿಸಲು ಇಲಾಖೆ ಮುಂದಾಗಿದೆ. ಇದಕ್ಕೆ ರೈತರು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರಿ ನಕಾಶೆಯ ಬಂಡಿ ದಾರಿಯನ್ನು ಕೆಲ ಗ್ರಾಮದ ರೈತರು ಒತ್ತುವರಿ ಮಾಡಿದ್ದು, ಅವುಗಳನ್ನು ಗುರುತಿಸಿ ತೆರವು ಕಾರ್ಯ ನಡೆಸಲಾಗುವುದು. ಬಂಡಿ ದಾರಿ ಒತ್ತುವರಿಯ ದೂರುಗಳು ಬಂದರೆ ಅಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-42-529521943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.