ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ನಾಡು ಕಂಡ ಅಪ್ರತಿಮ ನಾಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಕೊಳ್ಳೆಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಬಂಗಾರಧಾಮಕ್ಕೆ ಗುರುವಾರ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಂಗಾರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಬಂಗಾರಪ್ಪ ಅವರು ಉತ್ತಮ ಕ್ರೀಡಾಪಟುವಾಗಿದ್ದರು. ಸದೃಢವಾದ ಆರೋಗ್ಯ ಕಾಪಾಡಿಕೊಂಡು ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಸಚಿವ ಮಧು ಬಂಗಾರಪ್ಪ ಅವರು ತಂದೆ ತಾಯಿಯರ ನೆನಪಿಗಾಗಿ ಸುಂದರವಾದ ಬಂಗಾರಧಾಮ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಇದನ್ನು ಸರ್ಕಾರವು ರಾಜ್ಯದ ಪ್ರವಾಸೋದ್ಯಮ ತಾಣವಾಗಿ ಘೋಷಣೆ ಮಾಡಿರುವುದು ಹಿರಿಮೆ ಹೆಚ್ಚಿಸಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ತಾ.ಪಂ. ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಸದಸ್ಯರಾದ ಪ್ರಭಾಕರ ಶಿಗ್ಗಾ, ನಾಗರಾಜ್ ಚಿಕ್ಕಸವಿ, ಪ್ರಕಾಶ್ ಹಳೇಸೊರಬ, ಸುರೇಶ್ ಬಿಳವಾಣಿ, ಶಿವಣ್ಣ ನಡಹಳ್ಳಿ, ಅಬ್ದುಲ್ ರಶೀದ್ ಹಿರೇಕೌಂಶಿ, ಬಲೀಂದ್ರಪ್ಪ ಚಿಕ್ಕಾವಲಿ, ಶ್ರೀಕಾಂತ್ ಚಿಕ್ಕಶಕುನ, ಅಯೂಬ್ ಖಾನ್, ಮಂಜುನಾಥ್ ತಲಗಡ್ಡೆ, ಅತಿಕ್ ಉರ್ ರೆಹಮಾನ್, ಪ್ರಶಾಂತ್ ಮೇಸ್ತ್ರಿ, ಡಿ.ಎಸ್ ಪ್ರಸನ್ನ ಕುಮಾರ್ ದೊಡ್ಡನೆ, ತಹಶೀಲ್ದಾರ್ ಮಂಜುಳಾ ಹೆಗಡಾಳ್, ಇಒ ಶಶಿಧರ, ಬಿಸಿಎಂ ಅಧಿಕಾರಿ ಎಸ್. ಮೀನಾಕ್ಷಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.