ಸೊರಬ: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡುವರೆ ವರ್ಷ ಪೂರ್ಣಗೊಂಡರೂ ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲಕರ ಕಾರ್ಯ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಇತರೆ ಅಭಿವೃದ್ಧಿ ಕಾರ್ಯಗಳನ್ನು ಮರೆತಿರುವ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಆಡಳಿತಕ್ಕೆ ಮುಂದಾಗಿದೆ. ಆಡಳಿತ ಪಕ್ಷದ ಅಭಿವೃದ್ಧಿ ಕುಂಠಿತ ವಿಚಾರಗಳನ್ನು ಮುಂದಿಟ್ಟುಕೊಂಡು ತಾಲ್ಲೂಕಿನಲ್ಲಿ ಪಕ್ಷವನ್ನು ಸದೃಢವಾಗಿಸಲು ಮುಖಂಡರ ಜೊತೆ ಚರ್ಚೆ ನಡೆಸಲಾಗಿದೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಡಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ತುಂಬಾ ಹಿರಿಯರು ಇರುವುದರಿಂದ ಅವರ ಸಲಹೆ, ಸಹಕಾರ ಪಡೆದು ಪಕ್ಷ ಸಂಘಟಿಸಲು ಪಕ್ಷದಲ್ಲಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿದರು.

ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರಾಮಕೃಷ್ಣ, ಯುವ ಘಟಕದ ಅಧ್ಯಕ್ಷ ಮನುಕುಮಾರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಗಣಪತಿ ಟಿಜಿಕೊಪ್ಪ, ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾ ಸತೀಶ್, ತ್ಯಾಗರಾಜ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಗಯ್ಯ , ಕೆ.ಅಜ್ಜಪ್ಪ, ಹುಚ್ಚಪ್ಪ ಚಿಮಣೂರು, ಟೌನ್ ಅಧ್ಯಕ್ಷ ಗಣೇಶ್ , ಬಸವನೌಡ ಪಾಟೀಲ್,ವಿಷ್ಣು,ಮಹೇಶ ಹೆಗಡೆ,ಮಹೇಂದ್ರ, ಶ್ರೀಧರ್ ಶೇಟ್,ಆನಂದ ನಾಯಕ್,ಪುಂಡಲೀಕಪ್ಪ, ಶಿವಮೂರ್ತಿ ಮನೆಮನೆ, ಮೈಲಪ್ಪ, ಲಿಂಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.