ಸೊರಬ: ತಾಲ್ಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು.

ಹುಂಡಿ ಏಣಿಕೆ ಕಾರ್ಯವನ್ನು ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಪರಿಶೀಲಿಸಿದರು. ದೇಗುಲಕ್ಕೆ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ಭಕ್ತರು ನೀಡಿದ ಕಾಣಿಕೆ ಹುಂಡಿಯಲ್ಲಿನ ಹಣವನ್ನು ಎಣಿಕೆ ಮಾಡಲಾಯಿತು.

ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ ₹32,34,350 ಸಂಗ್ರಹವಾಗಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ದೇವಸ್ಥಾನದ ಕಾಣಿಕೆ ಹುಂಡಿ ಹಣವನ್ನು ಎಣಿಕೆ ಮಾಡಿದಾಗ ₹18,18,480 ಸಂಗ್ರಹವಾಗಿತ್ತು. ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತಲು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು.

ಎಣಿಕೆ ಕಾರ್ಯದಲ್ಲಿ ಸೊರಬ ತಾಲ್ಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್, ದೇವಸ್ಥಾನದ ಸಮಿತಿ ಆಢಳಿತಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ, ಶಿರಸ್ತೇದಾರ್ ರಮೇಶ್, ನಾಡಕಚೇರಿ ಉಪ ತಹಶೀಲ್ದಾರ್ ಲಲಿತಾ, ಚಂದ್ರಗುತ್ತಿ ರಾಜಸ್ವ ನಿರೀಕ್ಷಕ ವಿನೋದ್, ಮುಜರಾಯಿ ಇಲಾಖೆ ವಿಶೇಷ ನಿರ್ವಾಹಕಿ ಎಂ. ಶೃತಿ, ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕರು, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.