ಸೊರಬ: ‘ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದೆ. ಬಕ್ರೀದ್ ಹಬ್ಬದ ಹೆಸರಿನಲ್ಲಿ ನಡೆಯುವ ಗೋ ಹತ್ಯೆ ಮತ್ತು ಗೋವುಗಳ ಸಾಗಣೆ ತಡೆಯಬೇಕು’ ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಸಿ.ಪಿ. ಈರೇಶ್ ಗೌಡ ಆಗ್ರಹಿಸಿದರು.

ಪಟ್ಟಣದ ಕಾನುಕೇರಿ ಮಠದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದರು.

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗೋ ಹತ್ಯೆ ನಡೆಯುತ್ತಿರುವುದು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನ ಮೂಲಕ ನೆರೆಯ ತಾಲ್ಲೂಕುಗಳಿಗೆ ಪ್ರವೇಶಿಸುವ ವಾಹನಗಳನ್ನು ನಾಕಾ ಬಂದಿ ಹಾಕುವ ಮೂಲಕ ತಪಾಸಣೆ ನಡೆಸಬೇಕು’ ಎಂದು ಹೇಳಿದರು.

ವೇದಿಕೆಯ ಜಿಲ್ಲಾ ಸಹ ಸಂಚಾಲಕ ಲೋಕೇಶ್ ಕಕ್ಕರಸಿ ಮಾತನಾಡಿದರು. ಹಿಂದೂ ಜಾಗರಣಾ ವೇದಿಕೆ ಬೌದ್ಧಿಕ ಪ್ರಮುಖ್ ರಂಗನಾಥ ಮೊಗವೀರ್, ಪ್ರಮುಖರಾದ ನಾಗರಾಜ ಗುತ್ತಿ, ನವೀನ್ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-1119727374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.