ಸೊರಬ: ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಹಾಗೂ ರೈತ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರ್ ಕೆ. ಪುರಂದರ ಅವರಿಗೆ ಮನವಿ ಸಲ್ಲಿಸಲಾಯಿತು.

‘ರೈತರಿಗೆ ಎಫ್ಐಡಿ ಮೂಲಕ ರಸಗೊಬ್ಬರ ಕೊಡುವುದನ್ನು ರದ್ದುಪಡಿಸಿ ಮೊದಲಿನಂತೆ ನೀಡಬೇಕು. ಅರಣ್ಯ ಇಲಾಖೆಯವರು ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ರದ್ದುಗೊಳಿಸುವ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸುಂತೆ’ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಉಮೇಶ್ ಎನ್. ಪಾಟೀಲ್ ಒತ್ತಾಯಿಸಿದರು.

‘ರೈತರಿಗೆ ಬಿತ್ತನೆ ಬೀಜಗಳು ಸಮಯಕ್ಕೆ ಸರಿಯಾಗಿ ದೊರೆಯಬೇಕು. ಈ ವರ್ಷದ ಬೆಳೆ ವಿಮೆ ಸರಿಯಾದ ಸಮಯಕ್ಕೆ ರೈತರಿಗೆ ತಲುಪಬೇಕು. ಮಳೆ ಮಾಪನ ದುರಸ್ತಿಗೆ ಬಂದಲ್ಲಿ ಕೂಡಲೇ ಸರಿಪಡಿಸಬೇಕು. ಚಿಕ್ಕ ಬಳ್ಳಾಪುರದ ಶಿಡ್ಲಘಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಹತ್ತು ಸಾವಿರ ಬೈಕ್ಗಳ ಮೂಲಕ ಚಿಕ್ಕಬಳ್ಳಾಪುರದಿಂದ ವಿಧಾನ ಸೌಧದವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ್ ಚಂದ್ರ ಜಿರಲೆಕೊಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಅರೇಕೊಪ್ಪ, ಉಪಾಧ್ಯಕ್ಷ ಮೇಘರಾಜ್, ಕಾರ್ಯದರ್ಶಿ ವಿಶ್ವನಾಥ ಹೆಚ್ಚೆ, ಯುವರಾಜ್, ಚಂದ್ರಪ್ಪ, ಚಂದ್ರೇಗೌಡ, ಲೋಕಪ್ಪ, ಹಿರಿಯಪ್ಪ, ಯೋಗೀಶ್, ಚೆನ್ನಬಸಪ್ಪ, ಸೋಮಶೇಖರ್, ಹಿರಿಯಪ್ಪ, ಚಂದ್ರು, ಶಿವಾನಂದಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-1115701029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.