ಸೊರಬ: ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿವೆ. ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಅರ್ಹ ಫಲಾನುಭವಿಗಳಿಗೆ ಅವುಗಳನ್ನು ತಲುಪಿಸಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು.

ತಾ.ಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು, ಈಗಾಗಲೇ ₹ 356 ಕೋಟಿ ವೆಚ್ಚ ಭರಿಸಲಾಗಿದೆ. ಸಚಿವ ಮಧು ಬಂಗಾರಪ್ಪ ಅವರ ನಿರ್ದೇಶನದ ಮೇರೆಗೆ ಪ್ರತಿ ಹೋಬಳಿ ಹಾಗೂ ಗ್ರಾ.ಪಂ.ಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿಯೇ ತಲುಪಿಸಬೇಕು. ಅನರ್ಹರನ್ನು ದೂರ ಇಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಧಿಕಾರದ ಜಿಲ್ಲಾ ಘಟಕದ ಸದಸ್ಯ ಪ್ರಭಾಕರ್ ಶಿಗ್ಗಾ, ತಾ.ಪಂ.ವ್ಯವಸ್ಥಾಪಕ ಶ್ರೀರಾಮ್, ಯುವನಿಧಿ ಉದ್ಯೋಗಾಧಿಕಾರಿ ಕೆ.ಡಿ. ಮಂಜುನಾಥ್, ಘಟಕದ ಸದಸ್ಯರಾದ ಮಂಜುನಾಥ್ ತಲಗಡ್ಡೆ, ಸಂತೋಷ್ ಕೊರಕೋಡು, ಪಾಂಡು ಕೊಡಕಣಿ, ಮುಕ್ತಿಯಾರ್ ಬಾಷಾ, ಪ್ರವೀಣ್ ಕುಮಾರ್ ಶಾಂತಗೇರಿ, ಅಭಿಷೇಕ್ ದ್ಯಾವನಹಳ್ಳಿ, ವಿನಾಯಕ ಬಿಳಗಲಿ, ಜೈಶೀಲಣ್ಣ, ಸುಜಾತಾ ಜೋತಾಡಿ, ಜಯಶೀಲಪ್ಪ, ಆಹಾರ ಇಲಾಖೆ ಅಧಿಕಾರಿ ಯೋಗೇಶ್, ಸಿಡಿಪಿಒ ಸೋಮಶೇಖರ್, ಶಿವಮೂರ್ತಿ ಎಂ.ಜಿ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-220991857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.